ಕರ್ನಾಟಕ

karnataka

ETV Bharat / state

ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾಗೆ ಸಿಸಿಬಿ ಪೊಲೀಸರಿಂದ ಎರಡನೇ ನೋಟಿಸ್ - BENGALURU RAVE PARTY CASE - BENGALURU RAVE PARTY CASE

ಬೆಂಗಳೂರಿನಲ್ಲಿ ನಡೆದ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್​ ನಟಿ ಹೇಮಾಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಮತ್ತೊಮ್ಮೆ ನೋಟಿಸ್​ ಜಾರಿ ಮಾಡಿದ್ದಾರೆ.

ಕೇಂದ್ರ ಅಪರಾಧ ವಿಭಾಗ
ಕೇಂದ್ರ ಅಪರಾಧ ವಿಭಾಗ (ETV Bharat)

By ETV Bharat Karnataka Team

Published : May 29, 2024, 3:11 PM IST

ಬೆಂಗಳೂರು: ಜಿ‌. ಆರ್‌. ಫಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ತೆಲುಗು ಪೋಷಕ ನಟಿ ಹೇಮಾಗೆ ಎರಡನೇ ಬಾರಿ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.

ಮೇ 25ರಂದು ಪ್ರಕರಣದ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ನಟಿ ಹೇಮಾ ಸೇರಿದಂತೆ 8 ಜನರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ಅದರ ಪ್ರಕಾರ ಮೇ 27ರಂದು ತನಿಖಾಧಿಕಾರಿಯ ಮುಂದೆ ಹಾಜರಾಗಬೇಕಿತ್ತು. ಆದರೆ ಅನಾರೋಗ್ಯದ ಕಾರಣ ನೀಡಿದ್ದ ನಟಿ ಹೇಮಾ, ವಿಚಾರಣೆಗೆ ಹಾಜರಾಗಲು ಒಂದು ವಾರ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಮತ್ತೊಂದು ನೋಟಿಸ್ ರವಾನಿಸಿರುವ ಸಿಸಿಬಿ ಪೊಲೀಸರು ಜೂನ್ 1ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಹೇಮಾಗೆ ಸೂಚಿಸಿದ್ದಾರೆ‌.

ಮೇ 20ರಂದು ರಾತ್ರಿ ಬೆಂಗಳೂರು ಹೊರವಲಯದ ಹೆಬ್ಬಗೋಡಿ ಠಾಣಾ ವ್ಯಾಪ್ತಿಯ ಜಿ.ಆರ್. ಫಾರ್ಮ್ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಸ್ಥಳದಲ್ಲಿ ಕೆಲವು ಮಾದಕ ಪದಾರ್ಥಗಳು, ಆಂಧ್ರಪ್ರದೇಶದ ಶಾಸಕರೊಬ್ಬರ ಪಾಸ್ ಇರುವ ಕಾರು ಕೂಡ ಪತ್ತೆಯಾಗಿತ್ತು. ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಜನರನ್ನು ಪೊಲೀಸರು ವಶಕ್ಕೆ ಪಡೆದು, ವೈದ್ಯಕೀಯ ತಪಾಸಣೆಗೊಳಪಡಿಸಿದ್ದರು. ಅಲ್ಲದೆ ಪಾರ್ಟಿ ಆಯೋಜಿಸಿದ್ದ ಆರೋಪದಡಿ ವಾಸು, ವೈ. ಎಂ. ಅರುಣ್ ಕುಮಾರ್, ನಾಗಬಾಬು, ರಣಧೀರ್ ಬಾಬು, ಮೊಹಮ್ಮದ್ ಅಬೂಬಕ್ಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

ವೈದ್ಯಕೀಯ ತಪಾಸಣೆಗೊಳಪಟ್ಟಿದ್ದವರ ಪೈಕಿ 59 ಪುರುಷರು ಹಾಗೂ 27 ಮಹಿಳೆಯರ ಸಹಿತ ಒಟ್ಟು 86 ಜನ ಮಾದಕ ಪದಾರ್ಥ ಸೇವಿಸಿರುವುದು ವರದಿಯಲ್ಲಿ ದೃಢಪಟ್ಟಿತ್ತು.

ಇದನ್ನೂ ಓದಿ:ರೇವ್ ಪಾರ್ಟಿ ಪ್ರಕರಣ, ತೆಲುಗು ನಟಿ ಸಹಿತ 8 ಜನರಿಗೆ ಸಿಸಿಬಿ ನೋಟಿಸ್ - BENGALURU RAVE PARTY CASE

ABOUT THE AUTHOR

...view details