ಬೆಂಗಳೂರು:ವೀಸಾ ಅವಧಿ ಮುಗಿದ ಬಳಿಕವೂ ನಗರದಲ್ಲಿ ಅಕ್ರಮವಾಗಿ ವಾಸವಿರುವ ವಿದೇಶಿ ಪ್ರಜೆಗಳ ನಿವಾಸಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಪಾಸ್‌ಪೋರ್ಟ್ ಮತ್ತು ವೀಸಾ ಅವಧಿ ಮುಗಿದಿದ್ದರೂ ಸಹ ಕೆಲ ವಿದೇಶಿ ಪ್ರಜೆಗಳು ನಗರದಲ್ಲಿ ಅಕ್ರಮವಾಗಿ ವಾಸವಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಶಿವಾಜಿನಗರ ಮತ್ತು ರಾಮಮೂರ್ತಿ ನಗರದಲ್ಲಿ ದಾಳಿ ನಡೆಸಲಾಗಿದೆ. ಅಕ್ರಮವಾಗಿ ನೆಲೆಸಿರುವ ಆಫ್ರಿಕಾ ಸೇರಿದಂತೆ ವಿವಿಧ ವಿದೇಶಿ ಪ್ರಜೆಗಳ ವೀಸಾ ಮತ್ತು ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.