ಹುಬ್ಬಳ್ಳಿ:ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯದ ಒಟ್ಟು 470 ಕಿಲೋ ಮೀಟರ್ ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯದಿಂದ 2024-25ರ ಅವಧಿಗೆ 8,006 ಕೋಟಿ ರೂಪಾಯಿ ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಫೆಸ್ಬುಕ್ನಲ್ಲಿ ಪೋಸ್ಟ್ ಮಾಡಿರುವುದು (Prahlad Joshi X Account) ಸಾಮಾಜಿಕ ಜಾಲತಾಣವಾದ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಹೊಸದಾಗಿ 459 ಕಿಲೋ ಮೀಟರ್ ಉದ್ದದ ಹೊಸ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿಯನ್ನು (ಡಿ.ಪಿ.ಆರ್.) ಸಿದ್ಧಪಡಿಸಲು ₹15 ಕೋಟಿಯನ್ನು ಮಂಜೂರಿ ಮಾಡಿದೆ.
ಫೆಸ್ಬುಕ್ ಖಾತೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪೋಸ್ಟ್ ಹಾಕಿರುವುದು (Prahlad Joshi X Account) ನನ್ನ ಪ್ರಸ್ತಾವನೆಯ ಮೇರೆಗೆ ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಕಾಮಗಾರಿಗಳು:
- ನವಲಗುಂದ ಪಟ್ಟಣದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 52ಕ್ಕೆ 12 ಕಿಲೋಮೀಟರ್ ಉದ್ದದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ 350 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ.
- ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವರ್ತುಲದಿಂದ ಬೆಂಗಳೂರು ಮಾರ್ಗದಲ್ಲಿ ಬಂಕಾಪುರ ಚೌಕ್ ಬಿಡ್ನಾಳ ಕ್ರಾಸ್‌ವರೆಗೆ ವಿಸ್ತರಿಸುವ ಎಲಿವೇಟೆಡ್ ಕಾರಿಡಾರ್ ಕಾಮಗಾರಿಯ ವಿಸ್ತೃತ ಯೋಜನಾ ವರದಿ ತಯಾರಿಗಾಗಿ 25 ಲಕ್ಷ ರೂಪಾಯಿ ಮಂಜೂರು.
- ಕುಸುಗಲ್‌ನಿಂದ ನರೇಂದ್ರ ಕ್ರಾಸ್ವರೆಗಿನ ವರ್ತುಲ ರಸ್ತೆಯ ಕಾಮಗಾರಿಯ ವಿಸ್ತೃತ ಯೋಜನಾ ವರದಿ ತಯಾರಿಗಾಗಿ 41 ಲಕ್ಷ ರೂಪಾಯಿಗಳನ್ನು ಕೂಡ ತೆಗೆದಿರಿಸಲಾಗಿದೆ.
ಕರ್ನಾಟಕ ರಾಜ್ಯಕ್ಕೆ ಮೋದಿ ಸರ್ಕಾರ ರಸ್ತೆಗಳ ಉನ್ನತೀಕರಣ ಹಾಗೂ ಸುಗಮ ಸಂಚಾರಕ್ಕೆ ಅತೀ ಮಹತ್ವ ನೀಡುತ್ತಲಿದ್ದು, ಈ ಮಹತ್ವದ ನಿರ್ಧಾರ ಕೈಗೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಫೆಸ್ಬುಕ್ನಲ್ಲಿ ಪೋಸ್ಟ್ ಹಾಕಿರುವುದು (Prahlad Joshi X Account) ಈಗ ಕೂಡಲೇ ಡಿ.ಪಿ.ಆರ್. ಸಿದ್ಧಪಡಿಸಿ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಕಾಮಗಾರಿಗಳಿಗೆ ಚಾಲನೆ ನೀಡುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲೆ ಇದೆ ಎಂದಿದ್ದಾರೆ.
ಇದನ್ನೂ ಓದಿ:ಮತ್ತೆ ಸಿಎಂ ಆಗುವ ಇಂಗಿತ ಹೊರ ಹಾಕಿದ ಸತೀಶ ಜಾರಕಿಹೊಳಿ - CM Seat Issue