ಕರ್ನಾಟಕ

karnataka

ETV Bharat / state

ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಯಾವುದೇ ರೆಕಾರ್ಡ್ ಲಭ್ಯವಾಗಿಲ್ಲ: ಸಭಾಪತಿ ಹೊರಟ್ಟಿ - CT RAVI AND LAXMI HEBBALKAR ROW

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಪರಿಷತ್​ ಸದಸ್ಯ ಸಿ.ಟಿ.ರವಿ ನಡುವಿನ ವಾಕ್ಸಮರದ ಕುರಿತು ಪ್ರತಿಕ್ರಿಯಿಸಿರುವ ಸಭಾಪತಿ ಬಸವರಾಜ ಹೊರಟ್ಟಿ, ಒಂದೊಂದು ಸಲ ಯಾಕಾದರೂ ಅಲ್ಲಿ ಕೂತಿದ್ದೇನೆ ಅನಿಸುತ್ತೆ ಎಂದು ಅಸಮಾಧಾನ ಹೊರಹಾಕಿದರು.

HORATTI REACT ON CT RAVI STATEMENT
ಸಭಾಪತಿ ಬಸವರಾಜ ಹೊರಟ್ಟಿ (ETV Bharat)

By ETV Bharat Karnataka Team

Published : 12 hours ago

ಹುಬ್ಬಳ್ಳಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್​ಸಿ ಸಿ.ಟಿ.ರವಿ ಅವರು ಮಾತನಾಡಿದ್ದಾರೆ ಎನ್ನಲಾದ ಯಾವುದೇ ಅವಾಚ್ಯ ಪದ ಬಳಕೆ ರೆಕಾರ್ಡ್​ ಇಲ್ಲ. ಆದರೆ, ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ವಿಧಾನ ಪರಿಷತ್​​ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ನಗರದಲ್ಲಿಂದು ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಆಡಿಯೋ ರೆಕಾರ್ಡ್​ ಆಗಿಲ್ಲ. ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್​ ಹುಡುಕಿದ್ದೇನೆ. ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ಕು ಜನರು ಸಾಕ್ಷಿ ಹೇಳಿದ್ದಾರೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್​ ಇಬ್ಬರ ದೂರನ್ನೂ ಪಡೆದಿದ್ದೇವೆ ಎಂದು ತಿಳಿಸಿದರು.

ಸಭಾಪತಿ ಬಸವರಾಜ ಹೊರಟ್ಟಿ (ETV Bharat)

ಸದನದಲ್ಲಿ ಪ್ರಶ್ನೋತ್ತರ ವೇಳೆ ಮುಗಿದ ಬಳಿಕ, ಕಾಂಗ್ರೆಸ್​ನವರು ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ದ ಪ್ರತಿಭಟನೆಗೆ ಮುಂದಾದರು. ಈ ವೇಳೆ ಗಲಾಟೆ ಆಯ್ತು. ಗಲಾಟೆ ಹಿನ್ನೆಲೆ ಕಲಾಪ ಮುಂದೂಡಿದೆ. ಆಗ ಇದೆಲ್ಲ ಗಲಾಟೆ ಆಗಿದೆ. ಸಂಜೆ 6 ಗಂಟೆಗೆ ಸಿಟಿ ರವಿ ಬಂಧನವಾಗಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಹೊರಟ್ಟಿ ತಿಳಿಸಿದರು.

ನಾನು ಲಕ್ಷ್ಮೀ ಹೆಬ್ಬಾಳ್ಕರ್​ ಹಾಗೂ ಸಿಟಿ ರವಿ ಅವರನ್ನು ಕರೆದು ಮಾತನಾಡಿದೆ‌. ಇದನ್ನು ಇಲ್ಲಿಗೆ ಮುಗಿಸೋಣ ಅಂತ ಸಲಹೆ ಕೂಡ ನೀಡಿದೆ. ನಾನು ಹತಾಶರಾಗಿದ್ದಾರೆ ಎಂದಿದ್ದೇನೆ. ಅದನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ ಅಂತ ಸಿಟಿ ರವಿ ಅವರು ಹೇಳಿದ್ದಾರೆ. ಈ ರೀತಿ ಆಗಿರುವುದು ಮೊದಲ ಸಲ. 45 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಇಂತಹ ಘಟನೆ ಆಗಿರಲಿಲ್ಲ. ಒಂದೊಂದು ಸಲ ಯಾಕಾದರೂ ಅಲ್ಲಿ ಕೂತಿದ್ದೇನೆ ಅನಿಸುತ್ತೆ ಎಂದು ಹೊರಟ್ಟಿ ಅಸಮಾಧಾನ ಹೊರಹಾಕಿದರು.

ನಾನು ಯಾರ ಪರವೂ ಇಲ್ಲ. ಎರಡು ಕಡೆ ಯೋಚನೆ ಮಾಡಿದ್ದೇನೆ. ಇದು ಕಡ್ಡಿ ಹೋಗಿ ಗುಡ್ಡ ಆಯ್ತು. ಬೇಲಿಯೇ ಎದ್ದು ಹೊಲ ಮೇಯ್ದರೇ ಏನಾಗುತ್ತೆ? ಜನ‌ ನಮ್ಮನ್ನು ನೋಡುತ್ತಾರೆ. ಶಾಸಕರು ನಡವಳಿಕೆ ತಿದ್ದುಕೊಳ್ಳಬೇಕು ಎಂದು ಸಭಾಪತಿಗಳು ಇದೇ ವೇಳೆ ಕಿವಿ ಮಾತು ಹೇಳಿದರು.

ಇದನ್ನೂ ಓದಿ:

'ಸಿ.ಟಿ ರವಿ ಹಲವು ಬಾರಿ ಆ ಶಬ್ದ ಬಳಸಿದರು': ಸುದ್ದಿಗೋಷ್ಠಿಯಲ್ಲಿ ಗದ್ಗದಿತರಾದ ಲಕ್ಷ್ಮಿ ಹೆಬ್ಬಾಳ್ಕರ್ - LAKSHMI HEBBALKAR PRESS CONFERENCE

ಸಿಟಿ ರವಿ ಬಂಧನ ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ಬಿ ವೈ ವಿಜಯೇಂದ್ರ - BJP TO STAGE STATEWIDE PROTEST

ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಿ.ಟಿ. ರವಿ 12 ಬಾರಿ‌ ಅಶ್ಲೀಲ ಪದ ಬಳಸಿದ್ದಾರೆ, ನನ್ನ ಬಳಿ ದಾಖಲೆ ಇದೆ: ಡಿಕೆಶಿ - DCM D K SHIVAKUMAR

ABOUT THE AUTHOR

...view details