ಕರ್ನಾಟಕ

karnataka

ETV Bharat / state

ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ - Chalavadi Narayanaswamy

ಪರಿಷತ್ ವಿಪಕ್ಷ ನಾಯಕರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ - ಚಿಕ್ಕಮಗಳೂರಿನಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಇದೀಗ ಪರಿಷತ್ ವಿಪಕ್ಷ ನಾಯಕನಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ಬಿಜೆಪಿ ನೇಮಕ ಮಾಡಿದೆ.

By ETV Bharat Karnataka Team

Published : Jul 22, 2024, 10:52 PM IST

ಛಲವಾದಿ ನಾರಾಯಣಸ್ವಾಮಿ
ಛಲವಾದಿ ನಾರಾಯಣಸ್ವಾಮಿ (ETV Bharat)

ಬೆಂಗಳೂರು: ರಾಜ್ಯ ವಿಧಾನ ಪರಿಷತ್​ ಪ್ರತಿಪಕ್ಷ ನಾಯಕರಾಗಿ ಛಲವಾದಿ ನಾರಾಯಣ ಸ್ವಾಮಿ ಆಯ್ಕೆ ಮಾಡಲಾಗಿದೆ. ಪ್ರತಿಪಕ್ಷ ನಾಯಕನ ಹುದ್ದೆಗೆ ಸದಸ್ಯರಾದ ಸಿ.ಟಿ. ರವಿ​, ರವಿಕುಮಾರ್​ ಹಾಗೂ ಛಲವಾದಿ ನಾರಾಯಣ ಸ್ವಾಮಿ ನಡುವೆ ಪೈಪೋಟಿ ಇತ್ತು. ಇದೀಗ, ಬಿಜೆಪಿ ವರಿಷ್ಠರು ಪ್ರತಿಪಕ್ಷ ನಾಯಕನಾಗಿ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್​ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಛಲವಾದಿ ನಾರಾಯಣ ಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

''ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನೆಲೆಯಲ್ಲಿ ಛಲವಾದಿ ನಾರಾಯಣ ಸ್ವಾಮಿ ಅವರ ನಾಯಕತ್ವ ಹಾಗೂ ಪಕ್ಷ ಬದ್ಧತೆ ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಠರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ‘ಸಾಮಾಜಿಕ ನ್ಯಾಯ’ ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ''

''ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂ. ಗುಳುಂ, ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಮೀಸಲಾಗಿದ್ದ ಸಾವಿರಾರು ಕೋಟಿ ರೂಪಾಯಿಗಳು ಇತರ ಯೋಜನೆಗಳಿಗಾಗಿ ನಿಯಮ ಉಲ್ಲಂಘಿಸಿ ಬಳಕೆ, ಭ್ರಷ್ಟಾಚಾರಗಳ ಸರಣಿ ಸರಮಾಲೆ, ಸ್ವಜನ ಪಕ್ಷಪಾತ ಹಾಗೂ ಮುಡಾ ಹಗರಣಗಳ ವ್ಯೂಹದಲ್ಲಿ ಸಿಲುಕಿ ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನಾಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತಲು ನಾರಾಯಣ ಸ್ವಾಮಿ ಅವರನ್ನು ಆಯ್ಕೆ ಮಾಡಿರುವುದು ಸಮಯೋಚಿತ ನಿರ್ಧಾರವಾಗಿದೆ''.

''ಮಾನ್ಯ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಆತ್ಮೀಯವಾಗಿ ಅಭಿನಂದಿಸಿ ಅವರನ್ನು ಆಯ್ಕೆಮಾಡಿದ ಪಕ್ಷದ ವರಿಷ್ಠ ಮಂಡಳಿಗೆ ಕೃತಜ್ಞತೆ ಸಲ್ಲಿಸುವೆ'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ:ಸ್ಪೀಕರ್ ಯು.ಟಿ.ಖಾದರ್ ಕಲಾಪದ ವೈಖರಿಗೆ ಬಿಜೆಪಿ - ಜೆಡಿಎಸ್ ಸದಸ್ಯರ ಆಕ್ಷೇಪ - BJP and JDS members objection

ABOUT THE AUTHOR

...view details