ಹುಬ್ಬಳ್ಳಿ:ನೈರುತ್ಯ ವಲಯದ ನಿಟ್ಟೂರು ಮತ್ತು ಸಂಪಿಗೆ ರೋಡ್ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ 62ರಲ್ಲಿ ಕಾಮಗಾರಿ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿದೆ.
ಸಂಚಾರ ರದ್ದಾದ ರೈಲುಗಳು:ಜುಲೈ 18 ಹಾಗೂ 25ರಂದು ಕೆಲ ರೈಲುಗಳ ಸಂಚಾರ ರದ್ದು ಮಾಡಲಾಗಿದೆ.ತುಮಕೂರು - ಚಾಮರಾಜನಗರ (07346), ಚಾಮರಾಜನಗರ-ಮೈಸೂರು (07328), ಚಾಮರಾಜನಗರ - ಯಶವಂತಪುರ (16239), ಯಶವಂತಪುರ-ಚಾಮರಾಜನಗರ (16240), ತುಮಕೂರು-ಕೆಎಸ್ಆರ್ ಬೆಂಗಳೂರು (06576), ಕೆಎಸ್ಆರ್ ಬೆಂಗಳೂರು-ತುಮಕೂರು (06575), ಯಶವಂತಪುರ-ಶಿವಮೊಗ್ಗ ಟೌನ್ (16579) ಮತ್ತು ಶಿವಮೊಗ್ಗ ಟೌನ್-ಯಶವಂತಪುರ (16580) ರೈಲುಗಳು ರದ್ದುಗೊಂಡಿವೆ.
ಭಾಗಶಃ ರದ್ದು:ಜುಲೈ 18 ಹಾಗೂ 25ರಂದು ಕೆಎಸ್ಆರ್ ಬೆಂಗಳೂರು - ತುಮಕೂರು ನಿಲ್ದಾಣಗಳ ನಡುವೆ ಸಂಚರಿಸುವ (06571/06572) ರೈಲುಗಳನ್ನು ಹಿರೇಹಳ್ಳಿ - ತುಮಕೂರು ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ತಾಳಗುಪ್ಪ-ಕೆಎಸ್ಆರ್ ಬೆಂಗಳೂರು (20652) ರೈಲು, ಕೆಎಸ್ಆರ್ ಬೆಂಗಳೂರು-ಧಾರವಾಡ-ಕೆಎಸ್ಆರ್ ಬೆಂಗಳೂರು (12725/12726) ರೈಲುಗಳನ್ನು ಅರಸೀಕೆರೆ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದು ಮಾಡಲಾಗಿದೆ.
ಮಾರ್ಗ ಬದಲಾವಣೆ:ಜುಲೈ 17 ಮತ್ತು 24ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋಡಗಾಮಾ-ಯಶವಂತಪುರ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ, ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.