ಕರ್ನಾಟಕ

karnataka

ETV Bharat / state

ಚನ್ನಪಟ್ಟಣ ಉಪಚುನಾವಣೆ: ₹113 ಕೋಟಿ ಆಸ್ತಿ ಘೋಷಿಸಿದ ನಿಖಿಲ್‌ ಕುಮಾರಸ್ವಾಮಿ - NIKHIL KUMARASWAMY ASSET DETAILS

ಚನ್ನಪಟ್ಟಣದ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಒಟ್ಟು 78.15 ಕೋಟಿ ರೂ ಮೌಲ್ಯದ ಚರಾಸ್ತಿ, 29.34 ಕೋಟಿ ರೂ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

ಉಮೇದುವಾರಿಕೆ ಸಲ್ಲಿಸಿದ  ನಿಖಿಲ್‌ ಕುಮಾರಸ್ವಾಮಿ
ಉಮೇದುವಾರಿಕೆ ಸಲ್ಲಿಸಿದ ನಿಖಿಲ್‌ ಕುಮಾರಸ್ವಾಮಿ (ETV Bharat)

By ETV Bharat Karnataka Team

Published : Oct 25, 2024, 5:20 PM IST

ರಾಮನಗರ:ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಸಿದ್ದು, ತಮ್ಮ ಆಸ್ತಿ ವಿವರ ಘೋಷಿಸಿಕೊಂಡಿದ್ದಾರೆ.

ಬಿಬಿಎ ಪದವೀಧರನಾಗಿರುವ ನಿಖಿಲ್‌ 113 ಕೋಟಿ ರೂ ಆಸ್ತಿಯ ಒಡೆಯ. ಒಟ್ಟು 78.15 ಕೋಟಿ ಮೌಲ್ಯದ ಚರಾಸ್ತಿ, 29.34 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ರೇವತಿ ನಿಖಿಲ್ ಹೆಸರಲ್ಲಿ 5.49 ಕೋಟಿ ಮೌಲ್ಯದ ಚರಾಸ್ತಿ, 43 ಲಕ್ಷ ಮೌಲ್ಯದ ಸ್ಥಿರಾಸ್ತಿ ಇದೆ. ಮಗ ಆವ್ಯಾನ್ ದೇವ್ ಹೆಸರಲ್ಲಿ 11 ಲಕ್ಷ ಹಣ ಇದೆ.

ನಿಖಿಲ್ ಕುಮಾರಸ್ವಾಮಿ ಹೆಸರಲ್ಲಿ 1.488 ಕೆ.ಜಿ ಚಿನ್ನ, 16 ಕೆ.ಜಿ ಬೆಳ್ಳಿ ಹಾಗೂ ಪತ್ನಿ ರೇವತಿ ಹೆಸರಲ್ಲಿ 1.411 ಕೆ.ಜಿ ಚಿನ್ನ, 33.05 ಕೆ.ಜಿ ಬೆಳ್ಳಿ, 13 ಕ್ಯಾರೆಟ್ ಡೈಮಂಡ್ ಇದೆ. 1 ಇನ್ನೋವಾ ಐ ಕ್ರಾಸ್, 1 ರೇಂಜ್ ರೋವರ್ ಹಾಗೂ ಎರಡು ಕ್ಯಾರಾವ್ಯಾನ್, 1 ಇನ್ನೋವಾ ಕ್ರಿಸ್ಟ ಕಾರು ಹೊಂದಿದ್ದಾರೆ. ನಿಖಿಲ್ ಹೆಸರಲ್ಲಿ ಒಟ್ಟು 70.44 ಕೋಟಿ, ರೇವತಿ ಹೆಸರಲ್ಲಿ 4.96 ಕೋಟಿ ಸಾಲ ಇದೆ.

ಇದನ್ನೂ ಓದಿ:ಚನ್ನಪಟ್ಟಣ ಉಪಚುನಾವಣೆ: ಶಕ್ತಿ ಪ್ರದರ್ಶನದ ಮೂಲಕದ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ABOUT THE AUTHOR

...view details