ಕರ್ನಾಟಕ

karnataka

ETV Bharat / state

ಬಸ್‌ ನಿಲ್ದಾಣದ ಮಳಿಗೆಗಳಲ್ಲಿ ಅವಧಿ ಮೀರಿದ ಆಹಾರ ಮಾರಾಟ: ಮಾಲೀಕರಿಗೆ ಮುಖ್ಯಮಂತ್ರಿ ಕಚೇರಿ ಎಚ್ಚರಿಕೆ - CM office warning

ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಆಹಾರ ಪದಾರ್ಥಗಳ ಮಾರಾಟ ಮಾಡುವಾಗ ನಿಯಮ ಪಾಲಿಸುವಂತೆ ಮುಖ್ಯಮಂತ್ರಿ ಕಚೇರಿ ಎಚ್ಚರಿಕೆ ನೀಡಿದೆ.

By ETV Bharat Karnataka Team

Published : Jun 19, 2024, 11:25 AM IST

chief minister
ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)

ಬೆಂಗಳೂರು:ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿದ್ದಾರೆ.

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್‌ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿದೆ.

ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ಪುನರ್‌ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ, ನಿಯಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ:ಬಡವರು, ದಲಿತರ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ನೀವು ಸೇವೆಯಲ್ಲಿರಲು ಅನ್ ಫಿಟ್: ಸಿಎಂ ಸಿದ್ದರಾಮಯ್ಯ - CM Siddaramaiah Outrage

ABOUT THE AUTHOR

...view details