ಕರ್ನಾಟಕ

karnataka

ETV Bharat / state

ನಾಳೆಯಿಂದ 2 ದಿನಗಳ ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಸಿಎಂ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ - CM will 2 Days Visits Mysore - CM WILL 2 DAYS VISITS MYSORE

ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ತವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

Chief Minister Siddaramaiah's  Mysore visit
ನಾಳೆಯಿಂದ 2 ದಿನಗಳ ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಸಿಎಂ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ (ETV Bharat)

By ETV Bharat Karnataka Team

Published : Sep 19, 2024, 8:57 PM IST

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೆಪ್ಟೆಂಬರ್ 20 ಮತ್ತು 21 ರಂದು ತವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಎರಡು ದಿನಗಳು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.

ಸೆಪ್ಟೆಂಬರ್ 20 ರಂದು ಬೆಳಗ್ಗೆ 11.15ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮನ್ವಯ- ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ , ಬೆಂಗಳೂರು ಇವರ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿರುವ “ಸುವರ್ಣ ಸಂಭ್ರಮ ಕರ್ನಾಟಕ 50 ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ, ಕರ್ನಾಟಕ ಸಾಂಸ್ಕೃತಿಕ ಮುನ್ನೋಟ ಚಿಂತನಾ ಸಮಾವೇಶ” ದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 4 ಗಂಟೆಗೆ ಶ್ರೀ ಪಿ.ಆರ್. ತಿಪ್ಪೇಸ್ವಾಮಿ ಪ್ರತಿಷ್ಠಾನ (ರಿ.) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಲಲಿತಕಲಾ, ಶಿಲ್ಪಕಲಾ, ಜಾನಪದ, ಅಕಾಡೆಮಿಗಳು ಮತ್ತು ಕನ್ನಡ ಪುಸ್ತಕ ಪ್ರಾಧಿಕಾರ, ಶ್ರೀ ಕಲಾನಿಕೇತನ ಸ್ಕೂಲ್ ಆಫ್ ಆರ್ಟ್ (ರಿ.) ಕದಂಬ ರಂಗ ವೇದಿಕೆ (ರಿ.), ಚಿತ್ರವನ ರೆಸಾರ್ಟ್, ರಾಮ್ ಸನ್ಸ್ ಕಲಾ ಪ್ರತಿಷ್ಠಾನ (ರಿ.) ಇವರ ಸಂಯುಕ್ತಾಶ್ರಯದಲ್ಲಿ ಸಿಎ-15, ವಿಜಯನಗರ 2ನೇ ಹಂತದಲ್ಲಿರುವ ಶ್ರೀ ಕಲಾನಿಕೇತನ ಸ್ಕೂಲ್ ಆಫ್ ಆರ್ಟ್ಸ್​ನಲ್ಲಿ ಆಯೋಜಿಸಲಾಗಿರುವ ಪಿ.ಆರ್. ತಿಪ್ಪೇಸ್ವಾಮಿ ಜನ್ಮಶತಮಾನೋತ್ಸವ ಸಮಾರೋಪ ಸಮಾರಂಭ ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸೆಪ್ಟೆಂಬರ್ 21 ರಂದು ಬೆಳಗ್ಗೆ 10.30 ಗಂಟೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಮಾನಸ ಗಂಗೋತ್ರಿಯ ರಾಣಿಬಹದ್ದೂರ್ ಸಭಾಂಗಣದಲ್ಲಿ ಏರ್ಪಡಿಸಲಾಗಿರುವ ಪತ್ರಿಕಾ ದಿನಾಚರಣೆ 2024-ಹಿರಿಯ ಪತ್ರಕರ್ತರಿಗೆ ಅಭಿನಂದನೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ:ಲೈವ್ Karnataka News - Karnataka Today Live : ಕರ್ನಾಟಕ ವಾರ್ತೆ Thu Sep 19 2024 ಇತ್ತೀಚಿನ ಸುದ್ದಿ

ABOUT THE AUTHOR

...view details