ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣ: ವಿ.ಸೋಮಣ್ಣ - UNION MINISTER SOMANNA

ಮಂಗಳೂರಿಗೆ ಹೆಚ್ಚುವರಿ ರೈಲು ಜೊತೆಗೆ ಚಿಕ್ಕಮಗಳೂರು-ಬೇಲೂರು-ಆಲೂರಿಗೆ 585 ಎಕರೆ ಜಾಗವನ್ನು ಭೂಸ್ವಾಧಿನಕ್ಕೆ ಜಿಲ್ಲಾಧಿಕಾರಿ 11 ನೋಟಿಫಿಕೇಷನ್ ಮಾಡಿದ್ದು ಶೀಘ್ರದಲ್ಲೇ ನಮಗೆ ಹಸ್ತಾಂತರ ಮಾಡಲಿದ್ದಾರೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.

SOMANNA VISITS HASANAMBA TEMPLE
ಕುಟುಂಬ ಸಮೇತರಾಗಿ ಹಾಸನಾಂಬ ದೇವಿ ದರ್ಶನ ಪಡೆದ ಕೇಂದ್ರ ಸಚಿವ ವಿ.ಸೋಮಣ್ಣ (ETV Bharat)

By ETV Bharat Karnataka Team

Published : Oct 29, 2024, 4:55 PM IST

ಹಾಸನ: ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು.

ಕುಟುಂಬ ಸಮೇತರಾಗಿ ಇಂದು ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಡಳಿತದಿಂದ ಬಹಳ ಅಚ್ಚುಕಟ್ಟಾಗಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಉತ್ತಮ ವ್ಯವಸ್ಥೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಅಭಿನಂದನೆಗಳನ್ನು ತಿಳಿಸಿದರು.

ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಮಂಗಳೂರಿಗೆ ಹೆಚ್ಚುವರಿ ರೈಲು ಜೊತೆಗೆ ಚಿಕ್ಕಮಗಳೂರು-ಬೇಲೂರು-ಆಲೂರಿಗೆ 585 ಎಕರೆ ಜಾಗವನ್ನು ಭೂಸ್ವಾಧೀನಕ್ಕೆ ಜಿಲ್ಲಾಧಿಕಾರಿ 11 ನೋಟಿಫಿಕೇಷನ್ ಮಾಡಿದ್ದಾರೆ. ಶೀಘ್ರದಲ್ಲೇ ನಮಗೆ ಹಸ್ತಾಂತರ ಮಾಡಲಿದ್ದು, 3 ವರ್ಷದಲ್ಲಿ ಈ ಯೋಜನೆ ಮುಗಿಯಲಿದೆ ಎಂದರು.

ನಾನು ಸಚಿವನಾದ ಮೇಲೆ ರಾಜ್ಯದಲ್ಲಿ 11 ಯೋಜನೆ, 1800 ಹೊಸ ಲೈನ್​ಗಳನ್ನು ಹಾಕಲು ಚಾಲನೆ ಕೊಡಲಾಗಿದೆ. ಈಗಾಗಲೇ ತುಮಕೂರು, ರಾಯದುರ್ಗ, ದಾವಣಗೆರೆ, ಗದಗ ಸೇರಿ ಹಲವು ಕಡೆ ಕೆಲಸ ನಡೆಯುತ್ತಿದೆ. ಅಲ್ಲದೆ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ 43 ಸಾವಿರ ಕೋಟಿ ರೂಪಾಯಿಯ ನಾನಾ ರೈಲ್ವೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

44 ಸಾವಿರ ಡಬಲ್ ಲೈನ್ ರೈಲು ಮಾರ್ಗವು ಶೇ.98 ರಷ್ಟು ಎಲೆಕ್ಟ್ರಿಫಿಕೇಷನ್​ನೊಂದಿಗೆ ಹೊಸ ಲೈನ್​ಗಳನ್ನು ತ್ವರಿತಗತಿಯಲ್ಲಿ ಮಾಡಲು ಕ್ರಮ ತೆಗೆದುಕೊಂಡಿದ್ದೇವೆ. 104 ವಂದೇ ಭಾರತ್ ರೈಲುಗಳು ಇಡೀ ದೇಶದ 24 ರಾಜ್ಯಗಳಲ್ಲಿ 294 ಜಿಲ್ಲಾ ಕೇಂದ್ರಗಳಲ್ಲಿ ಸುತ್ತಾಡುತ್ತಿವೆ. ಕರ್ನಾಟಕ ರಾಜ್ಯದಲ್ಲೇ 10 ರೈಲುಗಳು ಓಡಾಡುತ್ತಿವೆ. ಹೊಸದಾಗಿ 30 ಸಾವಿರ ಹೊಸ ಬೋಗಿಗಳ ಅಳವಡಿಕೆ ಪ್ರಾರಂಭವಾಗಿದ್ದು, ಒಂದೊಂದು ಪ್ಯಾಸೆಂಜರ್ ರೈಲುಗಳಿಗೆ ಮೂರು, ನಾಲ್ಕು ಬೋಗಿಗಳನ್ನು ಅಳವಡಿಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

ತುಮಕೂರಿನಿಂದ ಬೆಂಗಳೂರಿಗೆ ಹೊಸದಾಗಿ ಮೆಮೊ ಟ್ರೈನ್ ಮಾಡಿದ್ದೇವೆ. ಅದೇ ರೈಲು ಹಾಸನದಿಂದ ಬೆಂಗಳೂರಿಗೆ ಸಂಚರಿಸಲು ಕೇಂದ್ರದ ಶೇ. 60 ದರದಲ್ಲಿ ಓಡಾಡಲು ವ್ಯವಸ್ಥೆ ಮಾಡಲು ಚಿಂತನೆ ನಡೆಸುತ್ತಿದ್ದೇವೆ. ಭಾರತದಲ್ಲಿ ರೈಲ್ವೆ ಇಲಾಖೆ ಇಡೀ ವಿಶ್ವದ ಭೂಪಟದಲ್ಲಿ ಐದನೇ ಸ್ಥಾನದಲ್ಲಿತ್ತು. ಅದನ್ನು ಮೂರನೇ ಸ್ಥಾನಕ್ಕೆ ತರಲು ತೀರ್ಮಾನ ಆಗಿದೆ. ನ.1-2 ರಂದು ಪ್ರಧಾನಮಂತ್ರಿಗಳು ಇಲಾಖೆ ಪ್ರಗತಿ ಪರಿಶೀಲನೆ ಮಾಡಲಿದ್ದಾರೆ. ಪತ್ರಕರ್ತರಿಗೆ, ಹಿರಿಯ ನಾಗರೀಕರಿಗೆ ನೀಡುತ್ತಿದ್ದ ರೈಲ್ವೆ ಪಾಸ್ ನಿಂತಿದೆ. ಶ್ರೀಮಂತರು ಇದರ ಲಾಭ ಪಡೆಯತ್ತಿದ್ದರು. ಆದ್ದರಿಂದ ಅರ್ಹರಿಗೆ ಮಾತ್ರ ಪಾಸ್ ಸೌಲಭ್ಯ ದೊರೆಯಬೇಕು ಎಂಬುದು ನಮ್ಮ ಆಶಯವಾಗಿದೆ. ಆದ್ದರಿಂದ ಮತ್ತೆ ರೈಲ್ವೆ ಪಾಸ್ ಅವಕಾಶ ಕೊಡಲು ನನ್ನದೂ ಒತ್ತಾಯವಿದೆ. ಪ್ರಧಾನಮಂತ್ರಿ ಅವರು ಆ ಕೆಲಸ ಮಾಡುತ್ತಾರೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈಲ್ವೆ ಇಲಾಖೆಯ 60 ಸಾವಿರ ಹುದ್ದೆಗಳಿಗೆ ಕನ್ನಡದಲ್ಲಿಯೇ ಪರೀಕ್ಷೆಗೆ ಅವಕಾಶ: ವಿ ಸೋಮಣ್ಣ

ABOUT THE AUTHOR

...view details