ಕರ್ನಾಟಕ

karnataka

ETV Bharat / state

ಶೃಂಗೇರಿ ಪೋಕ್ಸೊ ಕೇಸ್ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ - POCSO

2021 ರಲ್ಲಿ ದೂರು ದಾಖಲಾಗಿದ್ದ ಶೃಂಗೇರಿ ಪೋಕ್ಸೋ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ತಲಾ 25 ಸಾವಿರ ದಂಡ ಹಾಗೂ 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

District Additional Sessions Court
ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ

By ETV Bharat Karnataka Team

Published : Mar 11, 2024, 8:05 PM IST

ಚಿಕ್ಕಮಗಳೂರು:2021 ರಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಶೃಂಗೇರಿ ಪೋಕ್ಸೋ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಇಂದು ನಾಲ್ವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ. ನಾಲ್ಕು ಆರೋಪಿಗಳಿಗೆ ತಲಾ 25 ಸಾವಿರ ದಂಡ ಹಾಗೂ 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಬಾಲಕಿ ತಾಯಿ ಹಾಗೂ ಉಳಿದ ಆರೋಪಿಗಳಾದ ಗಿರೀಶ್ , ದೇವಿಶರಣ್​​ಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದರೆ, ಅಭಿನಂದನ್ ಅಲಿಯಾಸ್ ಸ್ಮಾಲ್ ಅಭಿಗೆ 22 ವರ್ಷ ಕಠಿಣ ಜೈಲು ಶಿಕ್ಷೆ ನೀಡಿದೆ. 2021ರಲ್ಲಿ ಅಪ್ರಾಪ್ತ ಮಗಳನ್ನು ತಾಯಿಯೇ ವೇಶ್ಯಾವಾಟಿಕೆ ದಂಧೆಗೆ ದೂಡಿದ್ದ ಪ್ರಕರಣ ಇದಾಗಿದೆ. ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆ 53 ಜನ ಆರೋಪಿಗಳನ್ನು ಬಂಧಿಸಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಈ ಪ್ರಕರಣದ ವಿವಿಧ ಅಪರಾಧದಡಿ 38 ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು.

2020ರ ಸೆಪ್ಟೆಂಬರ್ ನಿಂದ 2021 ರ ಜನವರಿ ವರೆಗೆ ಬ್ಲಾಕ್ ಮೇಲೆ ಮಾಡಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಕೇಳಿ ಬಂದಿತ್ತು. 2021 ರ ಜನವರಿ 27 ರಂದು 53 ಜನರ ವಿರುದ್ದ ಪ್ರಕರಣ ದಾಖಲಿಸಿದ್ದ ಪೊಲೀಸರು ಈ ಪ್ರಕರಣವನ್ನು ತನಿಖೆಗೊಳಪಡಿಸಿ ನಾಲ್ಕು ಜನರ ವಿರುದ್ಧ ಅಪರಾಧ ಸಾಬೀತು ಮಾಡಿದ್ದರು. ಒಂದೇ ಪ್ರಕರಣದಲ್ಲಿ 38 ವಿವಿಧ ರೀತಿಯ ಚಾರ್ಜ್​ಶೀಟ್​​​​ ಗಳನ್ನು ಪೊಲೀಸರು ಸಲ್ಲಿಕೆ ಮಾಡಿದ್ದರು.

ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಈ ಪ್ರಕರಣವನ್ನು ಸಂಪೂರ್ಣ ವಿಚಾರಣೆಗೊಳಪಡಿಸಿ ಉಳಿದ 49 ಮಂದಿಯನ್ನು ಈ ಪ್ರಕರಣದಿಂದ ಖುಲಾಸೆ‌ ಗೊಳಿಸಿದ್ದರು. ಬಳಿಕ ನಾಲ್ಕು ಆರೋಪಿಗಳಿಗೆ ನ್ಯಾಯಾಲಯವು ತಲಾ 25 ಸಾವಿರ ದಂಡ ಹಾಗೂ 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ಶಾಂತಣ್ಣ ಆಳ್ವ ಅವರು ಈ ತೀರ್ಪು ನೀಡಿದ್ದಾರೆ.

ಇದನ್ನೂಓದಿ:ಅತ್ಯಾಚಾರ ಮತ್ತು ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ವಿರುದ್ಧ ಆರೋಪ ಮರು ನಿಗದಿಗೆ ಸೂಚಿಸಿದ ಹೈಕೋರ್ಟ್

ABOUT THE AUTHOR

...view details