ದಾವಣಗೆರೆ :ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ. ರಂಜಾನ್ ಹಬ್ಬದ ಹಿನ್ನೆಲೆ ಉಪವಾಸ ಇದ್ದ ಮಕ್ಕಳು, ಉಪವಾಸ ಅಂತ್ಯ ಮಾಡಿ ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದಾರೆ. ಇದಾದ ಕೆಲವೇ ಗಂಟೆಯಲ್ಲಿ ಎಲ್ಲ ಮಕ್ಕಳಿಗೆ ಇದ್ದಕ್ಕಿದ್ದಂತೆ ವಾಂತಿ, ಭೇದಿ, ಹೊಟ್ಟೆ ನೋವು ಆರಂಭವಾಗಿದೆ.
ತಕ್ಷಣ ಪೋಷಕರು ಮಲೆಬೆನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಕ್ಕಳನ್ನು ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲದೇ ನಾಲ್ಕು ಜನ ಮಕ್ಕಳು ಗಂಭೀರವಾಗಿದ್ದು, ಅವರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮಾಹಿತಿ ತಿಳಿದು ಹರಿಹರ ತಹಶೀಲ್ದಾರ್ ಗುರು ಬಸವರಾಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.