ಕರ್ನಾಟಕ

karnataka

ETV Bharat / state

ಶಿವಮೊಗ್ಗ: ಅಣಬೆ ಸಾಂಬಾರು ಸೇವಿಸಿ ಐವರು ಮಕ್ಕಳು ಅಸ್ವಸ್ಥ - Children Fall Sick - CHILDREN FALL SICK

ಅಣಬೆ ಸಾಂಬಾರು ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮಕ್ಕಳು ಅಸ್ವಸ್ಥ
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ (ETV Bharat)

By ETV Bharat Karnataka Team

Published : May 28, 2024, 6:39 AM IST

ಶಿವಮೊಗ್ಗ: ಅಣಬೆ ಸಾಂಬಾರು ಸೇವಿಸಿ ಐವರು ಮಕ್ಕಳು ಅಸ್ವಸ್ಥರಾದ ಘಟನೆ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಗ್ರಾಮದಲ್ಲಿ ಬೆಳೆದಿದ್ದ ಅಣಬೆ ಕಿತ್ತು ತಂದು ಸಾಂಬಾರು ಮಾಡಲಾಗಿತ್ತು. ಇದನ್ನು ಮಧ್ಯಾಹ್ನ ಊಟದೊಂದಿಗೆ ತಿಂದ ಐವರು ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ. ಕೂಡಲೇ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ತಪಾಸಣೆ ನಡೆಸಿದ ವೈದ್ಯರು ಶಿಕಾರಿಪುರ ಆಸ್ಪತ್ರೆಗೆ ಕಳುಹಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು.

ಅಪಾಯದಿಂದ ಪಾರು:ಸಾಂಬಾರು ಸೇವಿಸಿದಐವರು ಮಕ್ಕಳು ಒಂದೇ ಕುಟುಂಬದವರಾಗಿದ್ದಾರೆ. ಇದೇ ಆಹಾರ ಸೇವಿಸಿದ ಮನೆಯ ಇತರೆ ಸದಸ್ಯರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಸದ್ಯ ಎಲ್ಲಾ ಮಕ್ಕಳು ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ನಟರಾಜ್ ದೂರವಾಣಿ ಮೂಲಕ ಮಾತನಾಡಿ, "ಗ್ರಾಮದಲ್ಲಿ ಬೆಳೆದಿದ್ದ ಅಣಬೆಯಿಂದ ತಯಾರಿಸಿದ್ದ ಸಾಂಬಾರು ಸೇವಿಸಿ ಮಕ್ಕಳು ಅಸ್ವಸ್ಥಗೊಂಡಿದ್ದರು. ಇದೀಗ ಎಲ್ಲರೂ ಆರೋಗ್ಯವಾಗಿದ್ದಾರೆ. ಮಂಗಳವಾರ (ಇಂದು) ಡಿಸ್ಚಾರ್ಜ್ ಮಾಡಲಾಗುವುದು" ಎಂದು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details