ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ತಲೆಮರೆಸಿಕೊಂಡಿದ್ದ ಚರ್ಚ್ ಪಾದ್ರಿಯನ್ನು ದಾವಣಗೆರೆ ಪೊಲೀಸರು ಹೈದರಾಬಾದ್ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದಾವಣಗೆರೆ ನಗರದ ಚರ್ಚ್‌ವೊಂದರ ಪಾದ್ರಿ ಬಿ.ರಾಜಶೇಖರ್ ಎಂದು ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ನಗರದ ನಿವಾಸಿಯಾದ ಸಂತ್ರಸ್ತ ಮಹಿಳೆ ವೃತ್ತಿಯಲ್ಲಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರಿಂದ ಪತಿ ದೂರವಾಗಿದ್ದಾರೆ. ಚರ್ಚ್‌ಗೆ ಪ್ರಾರ್ಥನೆ ಸಲ್ಲಿಸಲು ಆಗಮಿಸುತ್ತಿದ್ದ ಸಂತ್ರಸ್ತೆ ತನ್ನ ನೋವನ್ನು ಪಾದ್ರಿ ಬಳಿ ಹೇಳಿಕೊಂಡಿದ್ದರು. ಅದನ್ನೇ ಬಂಡವಾಳ ಮಾಡಿಕೊಂಡಿದ್ದ ಆರೋಪಿ ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಲಾಗಿದೆ.