ಹುಬ್ಬಳ್ಳಿ:ದರ್ವೇಶ್ ಕಂಪನಿಯಿಂದ ಬಹುಕೋಟಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿಯ ವಿಶಾಲನಗರದ ನಿವಾಸವೊಂದರ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದರ್ವೇಶ್ ಎಂಬ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚುವರಿ ಬಡ್ಡಿ ನೀಡುವ ಆಮಿಷವೊಡ್ಡಿ ವಂಚನೆ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ. ರಾಯಚೂರು ನಗರದಲ್ಲಿ ಹಲವರು ಈ ಸಂಬಂಧ ದೂರು ನೀಡಿದ್ದಾರೆ.