ಕರ್ನಾಟಕ

karnataka

ETV Bharat / state

ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನ ರಕ್ಷಣೆ: ಎನ್​ಡಿಆರ್​ಎಫ್​-ಎಸ್​ಡಿಆರ್​ಎಫ್ ಸಿಬ್ಬಂದಿಗೆ​ ಸಿಎಂ, ಮಾಜಿ ಸಿಎಂ ಅಭಿನಂದನೆ - VIJAYAPURA BOY RESCUED - VIJAYAPURA BOY RESCUED

ಕೊಳವೆ ಬಾವಿಗೆ ಬಿದ್ದ ಬಾಲಕನನ್ನು ರಕ್ಷಣೆ ಮಾಡಿದ ಎನ್​ಡಿಆರ್​ಎಫ್​ ಮತ್ತು ಎಸ್​ಡಿಆರ್​ಎಫ್​ ಸಿಬ್ಬಂದಿಗಳಿಗೆ ಸಿಎಂ, ಡಿಸಿಎಂ ಅಭಿನಂದನೆ ಸಲ್ಲಿಸಿದ್ದಾರೆ.

ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನ ರಕ್ಷಣೆ: ಎನ್​ಡಿಆರ್​ಎಫ್​-ಎಸ್​ಡಿಆರ್​ಎಫ್ ಸಿಬ್ಬಂದಿಗೆ​ ಸಿಎಂ, ಮಾಜಿ ಸಿಎಂ ಅಭಿನಂದನೆ
ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನ ರಕ್ಷಣೆ: ಎನ್​ಡಿಆರ್​ಎಫ್​-ಎಸ್​ಡಿಆರ್​ಎಫ್ ಸಿಬ್ಬಂದಿಗೆ​ ಸಿಎಂ, ಮಾಜಿ ಸಿಎಂ ಅಭಿನಂದನೆ

By ETV Bharat Karnataka Team

Published : Apr 4, 2024, 4:25 PM IST

Updated : Apr 4, 2024, 4:56 PM IST

ಬೆಂಗಳೂರು:ವಿಜಯಪುರದ ಇಂಡಿ ತಾಲೂಕಿನಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಪುಟ್ಟ ಬಾಲಕನನ್ನು ಎನ್​ಡಿಆರ್​ಎಫ್​ ಮತ್ತು ಎಸ್​ಡಿಆರ್​ಎಫ್​ ಸಿಬ್ಬಂದಿ 20 ಗಂಟೆಗೂ ಹೆಚ್ಚಿನ ಕಾಲ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಸಿಬ್ಬಂದಿಗಳ ಈ ಯಶಸ್ವಿ ಕಾರ್ಯಾಚರಣೆಗೆ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಎಕ್ಸ್​ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, "ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ. ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ - ಹಾರೈಕೆಗಳು ಫಲಿಸಿವೆ. ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು. ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವಗಳು ಬಲಿಯಾಗುತ್ತವೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು" ಎಂದು ಪೋಸ್ಟ್​ ಮಾಡಿದ್ದಾರೆ.

ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ, "ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಕೊಳವೆ ಬಾವಿಗೆ ಬಿದ್ದು ಜೀವನ್ಮರಣ ಹೋರಾಟ ನಡೆಸಿ ಮೃತ್ಯುಂಜಯನಾಗಿ ಹೊರಬಂದ ಮಗು ಚಿ.ಸಾತ್ವಿಕ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಅತ್ಯಂತ ಕಠಿಣ ಮತ್ತು ಸವಾಲಿನದ್ದು ಆಗಿದ್ದ ಈ ರಕ್ಷಣಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿ ಮಗುವಿನ ಜೀವ ಉಳಿದಿದ್ದು ನನಗೆ ಅತೀವ ಸಂತಸ ಉಂಟು ಮಾಡಿದೆ. ಮಗುವನ್ನು ರಕ್ಷಣೆ ಮಾಡಿದ ಎಲ್ಲಾ NDRF, SDRF, ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿಗೆ ಅವರ ಪೋಷಕರು ಮಾತ್ರವಲ್ಲ, ಇಡೀ ನಾಡಿಗೆ ನಾಡೇ ಋಣಿಯಾಗಿದೆ. ಈ ಎಲ್ಲಾ ಸಿಬ್ಬಂದಿಗೆ ಅಭಿನಂದನೆಗಳು"ಎಂದು ಬರೆದು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ:ವಿಜಯಪುರ: ಬೋರ್​ವೆಲ್​ಗೆ ಬಿದ್ದಿದ್ದ ಬಾಲಕನ ರಕ್ಷಣೆ; ಸಾವು ಗೆದ್ದು ಬಂದ ಸಾತ್ವಿಕ್​ - Boy Rescued from Borewell

Last Updated : Apr 4, 2024, 4:56 PM IST

ABOUT THE AUTHOR

...view details