ಬೆಂಗಳೂರು:ಗೋವಾದಲ್ಲಿ ಕನ್ನಡಿಗರಿಗೆ ಸೇರಿದ ಮನೆಗಳನ್ನು ತೆರವುಗೊಳಿಸುತ್ತಿರುವುದು ಕಳವಳಕಾರಿ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ಪೋಸ್ಟ್ ಮಾಡಿ ಆತಂಕ ವ್ಯಕ್ತಪಡಿಸಿದ್ದಾರೆ.
ಗೋವಾದ ಸಂಗೋಲ್ಡದಲ್ಲಿ ಕನ್ನಡಿಗರಿಗೆ ಸೇರಿದ ಮನೆಗಳನ್ನು ತೆರವುಗೊಳಿಸುತ್ತಿರುವುದು ಚಿಂತೆಗೀಡು ಮಾಡಿದೆ. ಈ ಕೂಡಲೇ ಮನೆಗಳ ತೆರವು ಕಾರ್ಯವನ್ನು ಸ್ಥಗಿತಗೊಳಿಸುವಂತೆ ಗೋವಾ ಸಿಎಂ ಪ್ರಮೋದ್ ಸಾವಂತ್ಗೆ ಮನವಿ ಮಾಡುತ್ತೇನೆ ಎಂದು ಕೋರಿದ್ದಾರೆ.
ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ ಮಾಡುವವರೆಗೆ ತೆರವು ಕಾರ್ಯ ಸ್ಥಗಿತಗೊಳಿಸಿ. ಪ್ರತಿ ಬಾಧಿತ ಕುಟುಂಬದ ಗೌರವ, ಸ್ಥಿರತೆಯನ್ನು ಎತ್ತಿ ಹಿಡಿಯುವುದು ಅತಿ ಮುಖ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಗೋವಾದ ಸಂಗೋಲ್ಡಾ ಪ್ರದೇಶದಲ್ಲಿ ಪೊಲೀಸ್ ರಕ್ಷಣೆಯಲ್ಲಿ ಅಧಿಕಾರಿಗಳು ಕಾನೂನುಬಾಹಿರ ಎನ್ನಲಾದ ಮನೆಗಳನ್ನು ತೆರವು ಮಾಡುತ್ತಿದ್ದಾರೆ. ಈ ಪ್ರದೇಶದಲ್ಲಿ ವಲಸೆ ಕನ್ನಡಿಗರು ಹೆಚ್ಚಿನ ಪ್ರಮಾಣದಲ್ಲಿ ವಾಸವಾಗಿದ್ದಾರೆ. ಇದೀಗ ಗೋವಾ ಅಧಿಕಾರಿಗಳು ಜೆಸಿಬಿ ಮೂಲಕ ಮನೆ ತೆರವುಗೊಳಿಸುತ್ತಿರುವುದರಿಂದ ನೂರಾರು ಕನ್ನಡಿಗರು ಬೀದಿಗೆ ಬೀಳುವ ಪರಿಸ್ಥಿತಿ ಎದುರಾಗಿದೆ.
ಇದನ್ನೂ ಓದಿ:ಅಂಬೇಡ್ಕರ್ ತತ್ವ ಸಿದ್ಧಾಂತಗಳನ್ನು ತೆಗೆಯುವ ಹುಚ್ಚು ಸಾಹಸಕ್ಕೆ ಕೆಲವರು ತಯಾರಾಗಿದ್ದಾರೆ: ದಿಂಗಾಲೇಶ್ವರ ಶ್ರೀ - DINGALESHWAR SEER