ಕರ್ನಾಟಕ

karnataka

ETV Bharat / state

ಹಿಂದಿನ ಸರ್ಕಾರದ್ದು ಬರೀ ಲೂಟಿ, ನಮ್ಮದು ರಾಜ್ಯದ ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ - ಬಜೆಟ್ ಮೇಲಿನ ಭಾಷಣ

ನಾವು ಗ್ಯಾರಂಟಿ ಯೋಜನೆಗಳ ಜಾರಿಯೊಂದಿಗೆ ರಾಜ್ಯದ ಅಭಿವೃದ್ಧಿಯನ್ನೂ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಹೇಳಿದರು.

ಸಿಎಂ ಸಿದ್ದರಾಮಯ್ಯ
ಹಿಂದಿನ ಸರ್ಕಾರದ್ದು ಬರೀ ಲೂಟಿ: ನಮ್ಮದು ರಾಜ್ಯದ ಅಭಿವೃದ್ಧಿ ಎಂದ ಸಿಎಂ

By ETV Bharat Karnataka Team

Published : Feb 29, 2024, 3:54 PM IST

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ, ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕಿರುವ ವ್ಯತ್ಯಾಸ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲಿನ ಭಾಷಣ ಕುರಿತ ಚರ್ಚೆಗೆ ಉತ್ತರ ನೀಡಿದ ಅವರು, ಬಸವರಾಜ ಬೊಮ್ಮಾಯಿ 2023ರ ಫೆಬ್ರುವರಿಯಲ್ಲಿ 3.09 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದರು. 2024-25ನೇ ಸಾಲಿಗೆ ನಾನು ಮಂಡಿಸಿದ ಆಯವ್ಯಯದ ಗಾತ್ರ 3,71,343 ಕೋಟಿ ರೂ. ನಷ್ಟಿದ್ದು, ಬೊಮ್ಮಾಯಿ ಮಂಡಿಸಿದ ಬಜೆಟ್‌ಗಿಂತ 62,200 ಕೋಟಿ ರೂ. ನಷ್ಟು ಗಾತ್ರ ಹೆಚ್ಚಳವಾಗಿದೆ.

ನಾನು ಜುಲೈ 2023ರಲ್ಲಿ ಮಂಡಿಸಿದ ಬಜೆಟ್‌ಗಿಂತ ಇದು 43,601 ಕೋಟಿ ರೂ. ಹೆಚ್ಚಳವಾಗಿದೆ. ಅಂತೆಯೇ ರಾಜ್ಯದ ಜಿಡಿಪಿ 25,63,247 ಕೋಟಿ ರೂ. ಇತ್ತು. 2024-25ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂರೆ 2,41,723 ಕೋಟಿ ರೂ. ಹೆಚ್ಚು. ಅಭಿವೃದ್ಧಿ ಇಲ್ಲದೆ ಆಯವ್ಯಯ ಗಾತ್ರ ಹಾಗೂ ಜಿಡಿಪಿ ಹೆಚ್ಚಳವಾಗಲು ಸಾಧ್ಯವೇ? ಎಂದು ಪ್ರಶ್ನಿಸಿದರು. ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿ ಬಜೆಟ್‌ ಓದುವಾಗ ಪ್ರತಿಪಕ್ಷದವರು ಗೈರು ಹಾಜರಾದದ್ದು ಇವರಿಗೆ ರಾಜ್ಯದ ಆರ್ಥಿಕತೆ ಬಗ್ಗೆ ಕಾಳಜಿ ಇಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್​ನ 9, ಬಿಜೆಪಿಯ 13 ಹಾಗೂ ಜೆಡಿಎಸ್​ನ ಮೂವರು ಸದಸ್ಯರು ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದಾರೆ. ಇಷ್ಟೂ ಸದಸ್ಯರು ಬಜೆಟ್‌ ಬಗ್ಗೆ ಅನೇಕ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಬಜೆಟ್‌ ಅನ್ನು ಟೀಕಿಸಿದ್ದಾರೆ. ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಇದೆಲ್ಲವನ್ನೂ ಸ್ವಾಗತ ಮಾಡುತ್ತೇನೆ ಎಂದರು.

2024-25ನೇ ಆಯವ್ಯಯದಲ್ಲಿ ಒಟ್ಟು ಬಜೆಟ್‌ ಗಾತ್ರ 3,71,343 ಕೋಟಿ ರೂ.ಗಳಾಗಿದ್ದು, ಇದರಲ್ಲಿ ರಾಜಸ್ವ ವೆಚ್ಚ 2,90,531 ಕೋಟಿ, ಬಂಡವಾಳ ವೆಚ್ಚ ಕೋಟಿ ರೂ.ಗಳಾಗಿದೆ. ನಾವು ಅಭಿವೃದ್ಧಿಗೂ ಆದ್ಯತೆ ನೀಡಿರುವುದಕ್ಕೆ ಇದು ಸಾಕ್ಷಿ. ಪ್ರತಿಪಕ್ಷದವರು ಅಭಿವೃದ್ಧಿ ಶೂನ್ಯ ಎಂದಿದ್ದಾರೆ. ಒಟ್ಟು ಅಭಿವೃದ್ಧಿ ಕಾರ್ಯಕ್ರಮಗಳಿಗೆ 1,20,000 ಕೋಟಿ ರೂ. ವೆಚ್ಚದ ಹಂಚಿಕೆ ಮಾಡಿದ್ದೇವೆ. 52,009 ಕೋಟಿ ರೂ. ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿರಿಸಿದ್ದು, ಉಳಿದ ಮೊತ್ತ ಅಭಿವೃದ್ಧಿ ಕಾರ್ಯಗಳಿಗೆ ಹಂಚಿಕೆ ಮಾಡಲಾಗಿದೆ. ವಿರೋಧ ಪಕ್ಷದವರು ಮಾಡಿರುವ ಆಪಾದನೆ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ 36,000 ಕೋಟಿ ರೂ. ವೆಚ್ಚ ಮಾಡಿದ್ದೇವೆ. ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ – ಈ ಕಾರ್ಯಕ್ರಮಗಳಿಗೆ 36,000 ಕೋಟಿ ರೂ. ಬಳಸಲಾಗಿದೆ. ಮುಂದಿನ ಬಜೆಟ್​ನಲ್ಲಿ 52,009 ಕೋಟಿ ಒದಗಿಸಿದ್ದು, ಇದರೊಂದಿಗೆ ಶಿಕ್ಷಣ, ಆರೋಗ್ಯ, ರಸ್ತೆಗಳು, ಶಾಂತಿ ಸುವ್ಯವಸ್ಥೆ ಎಲ್ಲದಕ್ಕೂ ಆದ್ಯತೆ ನೀಡಲಾಗಿದೆ ಎಂದರು.

ಇದನ್ನೂ ಓದಿ:ಬಿಬಿಎಂಪಿ ಬಜೆಟ್​ನಲ್ಲಿ 'ಬ್ರ್ಯಾಂಡ್ ಬೆಂಗಳೂರಿಗೆ' ಸಿಂಹಪಾಲು: ಯಾವುದಕ್ಕೆ ಎಷ್ಟು ಅನುದಾನ?

ABOUT THE AUTHOR

...view details