ಕರ್ನಾಟಕ

karnataka

ಆಗಸ್ಟ್‌ 22ರಂದು ತುರ್ತು ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ - Congress Legislative Party Meeting

By ETV Bharat Karnataka Team

Published : Aug 18, 2024, 2:55 PM IST

ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತುರ್ತು ಶಾಸಕಾಂಗ ಸಭೆ ಕರೆದಿದ್ದಾರೆ.

CM Siddaramaiah  Prosecution against CM Siddaramaiah  emergency legislative meeting
ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು:ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಗಸ್ಟ್‌ 22ರಂದು ತುರ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಗುರುವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ‌ ಸಭೆ ನಡೆಯಲಿದೆ. ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಿರುವ ಬಗ್ಗೆ ಚರ್ಚೆ ನಡೆಯಲಿದೆ. ಸಿದ್ದರಾಮಯ್ಯನವರು ಪಕ್ಷದ ಶಾಸಕರಿಗೆ ಪ್ರಕರಣದ ಕುರಿತು ವಿವರಣೆ ನೀಡಲಿದ್ದಾರೆ.

ಅದೇ ರೀತಿ, ಮುಂದಿನ‌ ಕಾನೂನು ಹೋರಾಟ, ರಾಜಕೀಯ ಹೋರಾಟದ ಬಗ್ಗೆಯೂ ಶಾಸಕರಿಗೆ ಸಲಹೆ, ಸೂಚನೆಗಳನ್ನು ನೀಡುವರು. ರಾಜಭವನವನ್ನು ಬಿಜೆಪಿಯವರು ಯಾವ ರೀತಿ ಬಳಕೆ ಮಾಡುತ್ತಿದ್ದಾರೆ ಎಂಬ ಬಗ್ಗೆ ಜನ ಜಾಗೃತಿ ಮೂಡಿಸುವಂತೆ ಶಾಸಕರಲ್ಲಿ ಮನವಿ ಮಾಡಲಿದ್ದಾರೆ.

ಬಿಜೆಪಿ-ಜೆಡಿಎಸ್‌ ವಿರುದ್ಧದ ಪ್ರಕರಣಗಳು, ಜ‌ನಪ್ರತಿನಿಧಿಗಳ ಕೋರ್ಟ್​ ಆದೇಶ ಹಾಗೂ ಕಾನೂನು ಹೋರಾಟದ ವೇಳೆ ತಮ್ಮ ಬೆನ್ನಿಗೆ ನಿಲ್ಲಲು ಸಿಎಂ‌ ಮನವಿ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ:ಪ್ರಾಸಿಕ್ಯೂಷನ್ ಅನುಮತಿಯಿಂದ ಸರ್ಕಾರ ಸ್ವಲ್ಪಮಟ್ಟಿಗೆ ಶೇಕ್​ ಆಗಿದೆ: ಜಿ.ಪರಮೇಶ್ವರ್ - Prosecution against CM

ABOUT THE AUTHOR

...view details