ಕರ್ನಾಟಕ

karnataka

ETV Bharat / state

ಸಿಎಂಗೆ ಎಡಗಾಲು ಮಂಡಿ ನೋವು: ಎರಡು ದಿನ ವಿಶ್ರಾಂತಿಗೆ ವೈದ್ಯರ ಸಲಹೆ - CM SIDDARAMAIAH HAS KNEE PAIN

ಸಿಎಂ ಸಿದ್ದರಾಮಯ್ಯನವರಿಗೆ ಎಡಗಾಲು ಮಂಡಿಯಲ್ಲಿ ನೋವು ಕಾಣಿಸಿಕೊಂಡಿದ್ದು ವೈದ್ಯರು ತಪಾಸಣೆ ನಡೆಸಿದ್ದಾರೆ.

BENGALURU  CM SIDDARAMAIAH KNEE PAIN  ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡಿ ನೋವು  TWO DAYS REST FOR CM
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Feb 2, 2025, 2:09 PM IST

ಬೆಂಗಳೂರು:ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಣಿಪಾಲ್​ ಆಸ್ಪತ್ರೆಯಲ್ಲಿ ತಪಾಸಣೆ ಒಳಗಾದರು.

ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಸಿಎಂ ಕಚೇರಿ ತಿಳಿಸಿದೆ.

ಇದನ್ನೂ ಓದಿ:ಸಂವಿಧಾನ ಬದಲಾಯಿಸಿ ಮನುಸ್ಮೃತಿ ತರುವ ಹುನ್ನಾರ : ಸಿಎಂ ಸಿದ್ದರಾಮಯ್ಯ

ABOUT THE AUTHOR

...view details