ಕರ್ನಾಟಕ

karnataka

ETV Bharat / state

ಕರ್ನಾಟಕ ಸಿಂಹ ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ - GANGADHAR RAO DESHPANDE

ಬೆಳಗಾವಿಯ ರಾಮತೀರ್ಥ ನಗರದಲ್ಲಿ ನಿರ್ಮಿಸಿರುವ ಗಂಗಾಧರ್​ ರಾವ್​ ದೇಶಪಾಂಡೆ ಸ್ಮಾರಕ ಭವನ ಹಾಗೂ ಛಾಯಾಚಿತ್ರ ಗ್ಯಾಲರಿಯನ್ನ ಸಿಎಂ ಸಿದ್ದರಾಮಯ್ಯಲೋಕಾರ್ಪಣೆಗೊಳಿಸಿದರು.

Gangadhar-rao-deshpande-memorial-hall
ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ (ETV Bharat)

By ETV Bharat Karnataka Team

Published : Dec 26, 2024, 3:21 PM IST

Updated : Dec 26, 2024, 3:52 PM IST

ಬೆಳಗಾವಿ :"ಗಾಂಧಿ ಭಾರತ" ಕಾರ್ಯಕ್ರಮ ಹಿನ್ನೆಲೆ ಬೆಳಗಾವಿಯ ರಾಮತೀರ್ಥ ನಗರದಲ್ಲಿ ನಿರ್ಮಿಸಿರುವ ಕರ್ನಾಟಕ ಸಿಂಹ ಗಂಗಾಧರ ರಾವ್ ದೇಶಪಾಂಡೆ ಅವರ ಸ್ಮಾರಕ ಭವನ‌ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

ಬೆಳಗಾವಿ ಕಾಂಗ್ರೆಸ್ ಅಧಿವೇಶನದ ರೂವಾರಿ ಆಗಿದ್ದ ಗಂಗಾಧರರಾವ್ ದೇಶಪಾಂಡೆ ಅವರ ಹೆಸರು ಅಜರಾಮರಗೊಳಿಸಲು 15 ಗುಂಟೆ ಜಾಗದಲ್ಲಿ 1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, ಉದ್ಯಾನವನವನ್ನು ಇಂದು ವಿಧ್ಯುಕ್ತವಾಗಿ ಲೋಕಾರ್ಪಣೆ ಆದವು. ದೇಶಪಾಂಡೆಯವರ ಪುತ್ಥಳಿಗೆ ನಮನ ಸಲ್ಲಿಸಿ, ಅವರ ಅಪರೂಪದ ಫೋಟೋಗಳನ್ನು ಸಿಎಂ ಸಿದ್ದರಾಮಯ್ಯ ಕಣ್ತುಂಬಿಕೊಂಡರು.

ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ (ETV Bharat)

ವಿಜ್ಞಾನ ಪಾರ್ಕ್ ಉದ್ಘಾಟನೆ : ಇದಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣ ವಿಧಾನಸೌಧದಲ್ಲಿ ನಿರ್ಮಿಸಿರುವ ವಿಜ್ಞಾನ ಭವನ‌ವನ್ನು ಉದ್ಘಾಟಿಸಿದರು.

ಗಂಗಾಧರ್ ರಾವ್ ದೇಶಪಾಂಡೆ ಪ್ರತಿಮೆಗೆ ನಮಿಸಿದ ಸಿಎಂ ಸಿದ್ದರಾಮಯ್ಯ (ETV Bharat)

ಈ ವೇಳೆ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಹೆಚ್. ಕೆ ಪಾಟೀಲ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ವೀರಪ್ಪ ಮೊಯ್ಲಿ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್(ರಾಜು) ಸೇಠ್​, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ, ಗಂಗಾಧರರಾವ್ ದೇಶಪಾಂಡೆಯವರ ಕುಟುಂಬಸ್ಥರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣಿ ದೇವಿ ಮಾಲಗತ್ತಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಸೇರಿ ಮತ್ತಿತರರು ಇದ್ದರು.

ದೇಶಪಾಂಡೆಯವರ ಫೋಟೋಗಳನ್ನ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ (ETV Bharat)

ಇದನ್ನೂ ಓದಿ :'ಗಾಂಧಿ ಭಾರತ' ಹೆಸರಿನಲ್ಲಿ‌ ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ - SIDDARAMAIAH

Last Updated : Dec 26, 2024, 3:52 PM IST

ABOUT THE AUTHOR

...view details