ಕರ್ನಾಟಕ

karnataka

ETV Bharat / state

ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ 3 ದಿನ ರಾಗಿ ಮಾಲ್ಟ್ ನೀಡುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ - ಮಕ್ಕಳಿಗೆ ರಾಗಿ ಮಾಲ್ಟ್

ಪೌಷ್ಠಿಕಾಂಶ ಕೊರತೆ ಆಗಬಾರದು ಎಂಬ ಕಾರಣಕ್ಕೆ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ ಮೂರು ದಿನ ರಾಗಿ ಮಾಲ್ಟ್
ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ ಮೂರು ದಿನ ರಾಗಿ ಮಾಲ್ಟ್

By ETV Bharat Karnataka Team

Published : Feb 22, 2024, 1:56 PM IST

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ ಮೂರು ದಿನ ರಾಗಿ ಮಾಲ್ಟ್ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕೆಎಂಎಫ್ ಹಾಗೂ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಸಹಯೋಗದೊಂದಿಗೆ ಸರ್ಕಾರಿ ಶಾಲಾ ಮಕ್ಕಳಿಗಾಗಿ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ ಮೂರು ದಿನ ರಾಗಿ ಮಾಲ್ಟ್

ವಿಧಾನಸೌಧ ಬ್ಯಾಂಕ್ವೆಟ್ ಹಾಲ್​​ನಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ನು ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ. KMF ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. ಈ ಹಾಲಿನ ಹಣವನ್ನು ಸರ್ಕಾರ KMFಗೆ ನೀಡುತ್ತದೆ. ಆ ಮೂಲಕ KMF ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜೊತೆಗೆ ಕಳೆದ ಬಜೆಟ್​​ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಶುರು ಮಾಡಿದೆವು ಎಂದರು.

ರಾಗಿ ಮಾಲ್ಟ್ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಇದನ್ನೂ ಓದಿ: ತಾನು ಓದಿದ ಶಾಲೆಗೆ ₹1.5 ಕೋಟಿ ವೆಚ್ಚದ ಸುಸಜ್ಜಿತ ಕಟ್ಟಡ ನಿರ್ಮಿಸಿಕೊಟ್ಟ ಅನಿವಾಸಿ ಭಾರತೀಯ

ಈಗ ಅತ್ಯಂತ ಪೌಷ್ಠಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳಿಗೆ ರಕ್ತ ಹೀನತೆ ಬರಲೇಬಾರದು. ಪೌಷ್ಠಿಕಾಂಶ ಕೊರತೆ ಆಗಲೇಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಢವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ. ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರ ಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ ಎಂದು ತಿಳಿಸಿದರು.

ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಹೆಚ್ಚಾಗಲು ಸಾಧ್ಯ. ಜ್ಞಾನದ ಬೆಳವಣಿಗೆ ಶಿಕ್ಷಣದಿಂದ ಸಾಧ್ಯ. ಶಿಕ್ಷಣ ಅಂದರೆ ಕೇವಲ ಓದು, ಬರಹ ಕಲಿಸುವುದಲ್ಲ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ವೈಚಾರಿಕತೆಯುಳ್ಳ ಶಿಕ್ಷಣ ಅಗತ್ಯ. ಉನ್ನತ ಶಿಕ್ಷಣ ಪಡೆದ ವೈದ್ಯರು, ಎಂಜಿನಿಯರ್​​ಗಳೂ ಈಗ ಮೌಢ್ಯಕ್ಕೆ ಜೋತು ಬಿದ್ದಿದ್ದಾರೆ. ಬಸವಾದಿ ಶರಣರು ಮೌಢ್ಯಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ವೈಚಾರಿಕ ಶಿಕ್ಷಣದಿಂದ ಮಾತ್ರ ಮೌಢ್ಯಮುಕ್ತ ಸಮಾಜ ನಿರ್ಮಾಣವಾಗಲು ಸಾಧ್ಯ ಅಭಿಪ್ರಾಯಪಟ್ಟರು.

ಶಿಕ್ಷಣ ಸಚಿವ ಮಧುಬಂಗಾರಪ್ಪ ಮಾತನಾಡಿ, ಅಪೌಷ್ಠಿಕತೆ ತೊಲಗಿಸಿದಾಗ ಮಕ್ಕಳು ಸದೃಢವಾಗಿ ಬೆಳೆದು ಶಿಕ್ಷಣದತ್ತ ಆಸಕ್ತಿ ವಹಿಸಲು ಸಾಧ್ಯ. ಮಕ್ಕಳ ಕೆಲಸ ಮಾಡೋದು ದೇವರ ಕೆಲಸ ಮಾಡಿದಂತೆ. ಇದಕ್ಕೆ KMF ಸಹಯೋಗದೊಂದಿಗೆ ನಡೆಯುತ್ತಿದೆ. ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಮಾಡುತ್ತಿರುವ ಸೇವೆಗೆ ಧನ್ಯವಾದ ಹೇಳುತ್ತೇನೆ. CSR ಫಂಡ್​​ನಿಂದ ಅನೇಕ ಶಾಲೆ ಅಭಿವೃದ್ಧಿ ಆಗ್ತಿದೆ. ನಮ್ಮ ರಾಜ್ಯದಲ್ಲಿ ಪುಟ್ಟಪರ್ತಿ ಆಸ್ಪತ್ರೆ ಇರಲಿಲ್ಲ. ಅಲ್ಲಿ ಸಿಗುವ ಉಚಿತ ಚಿಕಿತ್ಸೆಗಳನ್ನು ನಮ್ಮ ರಾಜ್ಯದ ಜನರು ಅಲ್ಲಿಗೆ ಹೋಗಿ ಪಡೆಯುತ್ತಿದ್ದರು. ಹೀಗಾಗಿ ನಮ್ಮ ತಂದೆ ಬಂಗಾರಪ್ಪ ಅವರು ಆ ಆಸ್ಪತ್ರೆಗೆ 2 ಕೋಟಿ ಹಣವನ್ನು ಕೊಟ್ಟಿದ್ರು ಇದನ್ನು ವಿರೋಧ ಪಕ್ಷ ವಿರೋಧ ಮಾಡಿದ್ದರು. ಹೀಗಾಗಿ ಮುಂದೆ ಸಹ ಅವರ ಸೇವೆ ಸಿಗುವಂತ ಆಗಬೇಕು ಎಂದು ಆಶಿಸಿದರು.

ಇದನ್ನೂ ಓದಿ: ಯಾದಗಿರಿ ಸರ್ಕಾರಿ ಶಾಲೆ ದುರವಸ್ಥೆ ಬಗ್ಗೆ ಎಕ್ಸ್ ಖಾತೆಗೆ ಟ್ಯಾಗ್: ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಕಚೇರಿ

ABOUT THE AUTHOR

...view details