ಕರ್ನಾಟಕ

karnataka

ETV Bharat / state

ಅರಣ್ಯ ಇಲಾಖೆಯೊಂದಿಗಿನ ಗೊಂದಲ ನಿವಾರಿಸಿ, ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದ ಹಿತಾಸಕ್ತಿ, ಅಭಿವೃದ್ಧಿಗೆ ಧಕ್ಕೆಯಾದರೆ ಸಹಿಸಲ್ಲ. ನಿಯಮ ಉಲ್ಲಂಘಿಸದೆ ಕ್ರಿಯಾಶೀಲತೆ ತೋರಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.

CM MEETING WITH OFFICIALS
ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ (ETV Bharat)

By ETV Bharat Karnataka Team

Published : Oct 30, 2024, 5:28 PM IST

ಬೆಂಗಳೂರು: ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.‌

ವಿಧಾನಸೌಧದ ಸಮಿತಿ ಕೊಠಡಿಯಲ್ಲಿಂದು ನಡೆದ ಗಣಿ, ಭೂವಿಜ್ಞಾನ ಹಾಗೂ ಅರಣ್ಯ ಇಲಾಖೆ ಸಭೆಯಲ್ಲಿ ಸಿಎಂ ಮಾತನಾಡಿದರು.

ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ (ETV Bharat)

ಗಣಿ ಇಲಾಖೆ ಪ್ರಗತಿ ಕಳೆದ ವರ್ಷ ಇದೇ ಅವಧಿಯಲ್ಲಿ ಶೇ. 54ರಷ್ಟಿತ್ತು. ಪ್ರಸಕ್ತ ಸಾಲಿನಲ್ಲಿ ಶೇ.46ರಷ್ಟು ರಾಜಸ್ವ ಸಂಗ್ರಹಣೆಯಾಗಿದೆ. ಅರಣ್ಯ ಇಲಾಖೆಯೊಂದಿಗಿನ ಇರುವ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಪ್ರಸಕ್ತ ಸಾಲಿಗೆ ರಾಜಸ್ವ ಸಂಗ್ರಹಣೆ ಗುರಿ ರೂ. 9000 ಕೋಟಿ, ಅಕ್ಟೋಬರ್‌ವರೆಗಿನ ರಾಜಸ್ವ ಸಂಗ್ರಹಣೆ ರೂ. 4070.22 ಕೋಟಿ ಎನ್ನುವ ವಿವರ ಆಲಿಸಿದ ಸಿಎಂ, ರಾಜ್ಯದ ಅಭಿವೃದ್ಧಿ, ಹಿತಾಸಕ್ತಿಗೆ ಪ್ರಾಮುಖ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಇದೇ ವೇಳೆ, ರಾಜ್ಯದ ಹಿತಾಸಕ್ತಿ, ಅಭಿವೃದ್ಧಿಗೆ ಧಕ್ಕೆ ಮಾಡಿದರೆ ಸಹಿಸಲ್ಲ. ನಿಯಮ ಉಲ್ಲಂಘಿಸದೆ ಕ್ರಿಯಾಶೀಲತೆ ತೋರಿ ಎಂದು ಅರಣ್ಯ ಇಲಾಖೆ ಪಿಸಿಸಿಎಫ್ ಅವರಿಗೆ ಸಿಎಂ ಸೂಚನೆ ನೀಡಿದರು.

ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ (ETV Bharat)

ಬೇರೆ ರಾಜ್ಯಗಳಲ್ಲಿ ಕಬ್ಬಿಣದ ಅದಿರನ್ನು ಅರಣ್ಯ ಉತ್ಪನ್ನ ಎಂದು ಪರಿಗಣಿಸಿರುವುದಿಲ್ಲ. ನಮ್ಮ ರಾಜ್ಯದಲ್ಲಿ ಇದೇ ಮಾದರಿ ಅಳವಡಿಸಿಕೊಳ್ಳಲು ಮುಂದಿನ ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ತರುವಂತೆಯೂ ಇದೇ ವೇಳೆ ತಿಳಿಸಿದರು.

ಗಣಿ ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಅತೀಕ್, ವಾಣಿಜ್ಯ ಮತ್ತು ಗಣಿ ಇಲಾಖೆ ಕಾರ್ಯದರ್ಶಿ ವಿಪುಲ್ ಬನ್ಸಲ್, ಅರಣ್ಯ, ಜೀವಿ ಪರಿಸ್ಥಿತಿ ಅಪರ ಮುಖ್ಯ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: 'ಟಾಕ್ಸಿಕ್' ಶೂಟಿಂಗ್ ಸ್ಪಾಟ್​​​ಗೆ ಸಚಿವ ಈಶ್ವರ್​ ಖಂಡ್ರೆ ಭೇಟಿ: ಮತ್ತೆ ಸಂಕಷ್ಟದಲ್ಲಿ ಯಶ್​ ಸಿನಿಮಾ

ABOUT THE AUTHOR

...view details