ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12,372 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಎರಡನೇ ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು 20,000 ಜನರು ಆಗಮಿಸಿದ್ದರು. ಬೆಳಿಗ್ಗೆ 10 ಗಂಟೆಯಿಂದ 7 ಗಂಟೆವರೆಗೆ ಕಾರ್ಯಕ್ರಮ ನಡೆಯಿತು. ಈ ಪೈಕಿ ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12,126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ.
ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮದಲ್ಲಿ 12,372 ಅರ್ಜಿ ಸ್ವೀಕಾರ - Siddaramaiah
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12 ಸಾವಿರಕ್ಕೂ ಹೆಚ್ಚಿನ ಅರ್ಜಿಗಳನ್ನು ಸ್ವೀಕರಿಸಲಾಗಿದೆ.
Published : Feb 8, 2024, 9:34 PM IST
ಕಂದಾಯ ಇಲಾಖೆಗೆ ಹೆಚ್ಚು ಅರ್ಜಿ:ಕಂದಾಯ ಇಲಾಖೆಗೆ ಅತೀ ಹೆಚ್ಚು ಅಂದರೆ 3,150 ಅರ್ಜಿಗಳು ಸ್ವೀಕಾರವಾಗಿದ್ದರೆ, ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಒಂದು ಅರ್ಜಿ ಸ್ವೀಕಾರವಾಗಿದೆ. ವಸತಿ ಇಲಾಖೆಗೆ 1500 ಅರ್ಜಿಗಳು ಸ್ವೀಕಾರವಾಗಿ ಎರಡನೇ ಸ್ಥಾನದಲ್ಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 903 ಅರ್ಜಿಗಳು ಸಲ್ಲಿಕೆಯಾಗಿವೆ. ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ, ಮುಖ್ಯ ಕಾರ್ಯದರ್ಶಿಗಳ ಕಾರ್ಯಾಲಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಇ- ಆಡಳಿತ) ಮುಖ್ಯಮಂತ್ರಿಗಳ ಕಾರ್ಯಾಲಯ, ಸಂಸದೀಯ ವ್ಯವಹಾರಗಳ ಇಲಾಖೆ - ಈ ಐದು ಇಲಾಖೆಗಳಲ್ಲಿ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ. ಬಾಕಿ ಅರ್ಜಿಗಳನ್ನು ಒಂದು ತಿಂಗಳೊಳಗೆ ಇತ್ಯರ್ಥಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ:ಸಿಎಂ ಜನಸ್ಪಂದನಾ ಕಾರ್ಯಕ್ರಮದಲ್ಲಿ ಅಹವಾಲುಗಳ ಮಹಾಪೂರ: ಕೆಲವರಿಗೆ ಸ್ಥಳದಲ್ಲೇ ಪರಿಹಾರ