ಕರ್ನಾಟಕ

karnataka

ETV Bharat / state

ಬೆಂಗಳೂರು: ಹಜ್ ಯಾತ್ರಿಕರನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ - Siddaramaiah at Haj Pilgrims Sendup - SIDDARAMAIAH AT HAJ PILGRIMS SENDUP

ಹಜ್ ಯಾತ್ರಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ, ಯಾತ್ರಿಕರಿಗೆ ಶುಭಕೋರಿದರು.

ಹಜ್ ಯಾತ್ರಿಕರನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ
ಹಜ್ ಯಾತ್ರಿಕರನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : May 21, 2024, 8:00 PM IST

ಬೆಂಗಳೂರು:ಎಲ್ಲ ಧರ್ಮದವರೂ ಒಂದು ತಾಯಿಯ ಮಕ್ಕಳಂತೆ ಇರಲು ಎಲ್ಲ ಧರ್ಮದವರಲ್ಲೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ತುಂಬಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ಹೆಗಡೆ ನಗರದಲ್ಲಿರುವ ಹಜ್ ಭವನದಲ್ಲಿ ಆಯೋಜಿಸಲಾಗಿದ್ದ ಹಜ್ ಯಾತ್ರಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.

10,168 ಹಜ್ ಯಾತ್ರಿಗಳ ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಕೋರಿದ್ದೇನೆ. ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ನೆಲಸಲಿ ಎಂದು ಪ್ರಾರ್ಥಿಸುವಂತೆ ತಿಳಿಸಿದ್ದೇನೆ. ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದಂತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಸಿಖ್ ಧರ್ಮದವರೆಲ್ಲ ಒಂದು ತಾಯಿಯ ಮಕ್ಕಳಂತೆ ಇರಬೇಕು. ಅಂಥ ವಾತಾವರಣ ನಿರ್ಮಾಣವಾಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ಬಂದು ಎಲ್ಲರೂ ಸಬಲರಾಗಬೇಕು. ಅದಕ್ಕೆ ಹಜ್ ಯಾತ್ರಿಗಳು ಪ್ರಾರ್ಥಿಸಲಿ. ಪ್ರಸ್ತುತ ಆರ್ಥಿಕ ವರ್ಷದಲ್ಲಿ ದೇಶ ಹಾಗೂ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬೆಳೆ ಬರಲಿ, ನಾಡು ಸಮೃದ್ಧವಾಗಲಿ ಎಂದು ಪ್ರಾರ್ಥಿಸುವಂತೆ ಎಲ್ಲಾ ಯಾತ್ರಾರ್ಥಿಗಳಲ್ಲಿ ಮನವಿ ಮಾಡುವುದಾಗಿ ತಿಳಿಸಿದರು.

ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರಕ್ಕೆ ವರ್ಷದ ಹರುಷ: ಹತ್ತು ಹಲವು ಸವಾಲಿನ ಮಧ್ಯೆ ಪಂಚ ಗ್ಯಾರಂಟಿ ಕೇಂದ್ರಿತ ಆಡಳಿತ - ONE YEAR FOR CONGRESS GOVT

ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ:ಮಂಗಳೂರು ಮತ್ತು ಕಲಬುರಗಿಯಲ್ಲಿ ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ ಒದಗಿಸಲಾಗಿದೆ. ಕಲಬುರಗಿಯಲ್ಲಿ ಸ್ಥಳ ಸಿಗದೇ ವಿಳಂಬವಾಗಿದೆ. ಮಂಗಳೂರಲ್ಲಿ ಸ್ಥಳ ಗುರುತಿಸಲಾಗಿದೆ. ನೀತಿ ಸಂಹಿತೆ ಮುಗಿದ ಮೇಲೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಪ್ರತಿಕ್ರಿಯೆ ನೀಡಿದರು.

ಬಳಿಕ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಸಿಎಂ, 'ಬೆಂಗಳೂರಿನ ಹೆಗಡೆ ನಗರದ ಹಜ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪವಿತ್ರ ಹಜ್ ಯಾತ್ರೆಗೆ ಹೊರಟಿರುವ ಯಾತ್ರಾರ್ಥಿಗಳನ್ನು ಬೀಳ್ಕೊಟ್ಟೆ. ಹಜ್ ಸಚಿವರಾದ ರಹೀಂ ಖಾನ್, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಮುಖಂಡರು ಹಾಗೂ ಶಾಸಕರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು' ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ರಾಜ್ಯ ಸರ್ಕಾರಕ್ಕೆ ಒಂದು ವರ್ಷ: ಗ್ಯಾರಂಟಿ, ಅಭಿವೃದ್ಧಿ ಯೋಜನೆಗಳ ವೆಚ್ಚದ ಮಾಹಿತಿ ನೀಡಿದ ಸಿದ್ದರಾಮಯ್ಯ - One Year For Congress Govt

ABOUT THE AUTHOR

...view details