ತುಮಕೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ತುಮಕೂರು ಹೊರವಲಯದ ಸೋರೆಕುಂಟೆ ಬಳಿಯ ಪಿ.ಗೊಲ್ಲಹಳ್ಳಿಗೆ ಆಗಮಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿದರು.
ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ನಲ್ಲಿ ಆಗಮಿಸದೇ ಬೆಂಗಳೂರಿನಿಂದ ರಸ್ತೆ ಮೂಲಕ ಆಗಮಿಸಿ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿದರು. ಶಂಕುಸ್ಥಾಪನೆ ನಂತರ ಗುದ್ದಲಿ ಪೂಜೆ ಕೂಡ ನೆರವೇರಿಸಿದರು. ಆನಂತರ ಕ್ರಿಕೆಟ್ ಪಿಚ್ನಲ್ಲಿ ಸಾಂಕೇತಿಕವಾಗಿ ಬ್ಯಾಟಿಂಗ್ ಆಡಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಬೌಲಿಂಗ್ ಮಾಡಿದರು. ಸಿಎಂ ಬಳಿಕ ಗೃಹ ಸಚಿವ ಜಿ. ಪರಮೇಶ್ವರ್, ಸಹಕಾರ ಸಚಿವ ಕೆ.ಎನ್ ರಾಜಣ್ಣ, ಶಾಸಕ ಸುರೇಶ್ ಬ್ಯಾಟಿಂಗ್ ಮಾಡಿದರು.
ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿದ್ದರಾಮಯ್ಯ (ETV Bharat) ನಂತರ ನೂತನ ಕ್ರೀಡಾಂಗಣದ ಜಮೀನಿನ ಮಂಜೂರಾತಿ ಪತ್ರವನ್ನು ಸಿದ್ದರಾಮಯ್ಯ ಅವರಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಕಾರ್ಯದರ್ಶಿ ಶಂಕರ್ ಅವರಿಗೆ ಹಸ್ತಾಂತರ ಮಾಡಲಾಯಿತು. 41 ಎಕರೆ ಭೂಮಿಯ ಪತ್ರ ಇದಾಗಿದ್ದು, ಭಾರಿ ಮೊತ್ತದಲ್ಲಿ ಸುಸಜ್ಜಿತ ಸ್ಟೇಡಿಯಂ ನಿರ್ಮಾಣವಾಗಲಿದೆ.
ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ, ಮೈಸೂರಿನಲ್ಲಿಯೂ ಕ್ರಿಕೆಟ್ ಸ್ಟೇಡಿಂಗ್ ನಿಮಾಣಕ್ಕೆ ಜಾಗ ಕೊಡಲಾಗುವುದು. ಇವತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅವರು ತುಮಕೂರಿನಲ್ಲಿ ಒಂದು ಕ್ರೀಡಾಂಗಣ ನಿರ್ಮಾಣ ಮಾಡುತ್ತಿದ್ದಾರೆ. 41 ಎಕರೆ ಜಮೀನು, 9 ಎಕರೆ ಖರಾಬು ಸೇರಿ ಒಟ್ಟು 50 ಎಕರೆ ಅವರಿಗೆ ಸಿಗುತ್ತಿದೆ. ಇದು ಒಳ್ಳೆ ಪ್ರದೇಶ ಎಂದು ತಿಳಿಸಿದರು.
ತುಮಕೂರು: ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ (ETV Bharat) ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿರುವುದು (ETV Bharat) ತುಮಕೂರಿನ ಭಾಗದಲ್ಲಿ ಕ್ರಿಕೆಟ್ ಬೆಳೆಯಲು ಅವಕಾಶ ಕಲ್ಪಿಸಿಕೊಡಬೇಕು. ಬೆಂಗಳೂರಿಗೆ 90 ಕಿಲೋ ಮೀಟರ್ ದೂರವಿದೆ. 1.15 ಗಂಟೆ ಜರ್ನಿಯಾಗಲಿದೆ. ಇಲ್ಲಿ ಇಂಡಸ್ಟ್ರೀ ಕೂಡ ಇದೆ. ಅಸೋಸಿಯೇಷನ್ಗೆ ಮೈಸೂರಿನಲ್ಲೂ ಸರ್ಕಾರಿ ಜಮೀನು ಕೊಡ್ತೀವಿ. ಈ ಭಾಗದಲ್ಲಿ ಕ್ರಿಕೆಟ್ ಬೆಳೆಯೋದಕ್ಕೆ ಅವಕಾಶ ನೀಡಬೇಕು ಎಂದು ಸಿಎಂ ತಿಳಿಸಿದರು.
ಈ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಸಿಎಂ, ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದರು.
ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ (ETV Bharat) ಶಾಸಕ ಸುರೇಶ್ ಗೌಡಗೆ ಟಾಂಗ್: ಒಂದೆಡೆ ಸರ್ಕಾರದಲ್ಲಿ ದುಡ್ಡಿಲ್ಲ ಎನ್ನುತ್ತಿಯಾ, ಇನ್ನೊಂದೆಡೆ ಅಭಿವೃದ್ಧಿ ಮಾಡೋದಿಲ್ಲ ಎನ್ನುತ್ತಿಯಾ, ಎಲ್ಲಿಂದ ಕೇಳ್ತಿಯಾ ನೀನು ಎಂದು ಗ್ರಾಮಾಂತರ ಶಾಸಕ ಸುರೇಶ್ ಗೌಡ ಅವರಿಗೆ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಟಾಂಗ್ ಕೊಟ್ಟರು.
ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ (ETV Bharat) ನಾನು 41 ವರ್ಷದಿಂದ ಮಂತ್ರಿ ಆಗಿದ್ದೇನೆ. ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ವೇದಿಕೆಯಲ್ಲೆ ಉತ್ತರಿಸಿದರು.
ಗೃಹ ಸಚಿವರೂ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರು, ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದ ರಘುರಾಮ್ ಭಟ್ ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ (ETV Bharat) ಇದನ್ನೂ ಓದಿ: ದಾವಣಗೆರೆ - ತುಮಕೂರು ನೇರ ಮಾರ್ಗ: ರೈಲು ನೋಡದವರಿಗೂ ಟ್ರೈನ್ ಭಾಗ್ಯ, ಮೂರು ಜಿಲ್ಲೆಗಳ ಈ ಊರುಗಳಿಗೆ ಹೊಸ ನಿಲ್ದಾಣಗಳಿವು