ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವಿಚಾರ ಚರ್ಚೆಗೆ ಬಂದಿದೆ. ಸ್ವತ: ಸಿದ್ದರಾಮಯ್ಯನವರೇ ಜಾತಿ ಜನಗಣತಿ ವರದಿ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಾತಿ ಜನಗಣತಿ ವರದಿ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಅಗತ್ಯತೆ ಬಗ್ಗೆ ಸಿಎಂ ಒತ್ತಿ ಹೇಳಿದ್ದಾರೆ. ಆರ್ಥಿಕ, ಸಾಮಾಜಿಕ ವರದಿ ಪಡೆದಿದ್ದೇವೆ. ಅದರ ಮೇಲೆ ಯಾವುದೇ ಕ್ರಮವಾಗಿಲ್ಲ. ಆದಷ್ಟು ಶೀಘ್ರದಲ್ಲಿ ವರದಿಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಬೇಕಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜಾತಿ ಜನಗಣತಿ ಸಂಬಂಧ ಸಚಿವ ಸಂಪುಟ ಉಪ ಸಮಿತಿ ಅಥವಾ ತಜ್ಞರ ಸಮಿತಿ ರಚಿಸುವ ಬಗ್ಗೆಯೂ ಸಿಎಂ ಮಾತನಾಡಿದ್ದಾರೆ. ಆದಷ್ಟು ಬೇಗ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಮಾರ್ಚ್‌ನಲ್ಲಿ ಬಜೆಟ್ ಮಂಡಿಸಲು ಸಿಎಂ ಒಲವು:ಮಾರ್ಚ್ ತಿಂಗಳ ಎರಡನೇ ವಾರದಲ್ಲಿ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನ ನಡೆಸುವ ಬಗ್ಗೆ ಸಿಎಂ ಸಭೆಯಲ್ಲಿ ಚರ್ಚಿಸಿದ್ದಾರೆ. ತೆರಿಗೆ ಸಂಗ್ರಹ ಇಲಾಖೆಗಳ ಜೊತೆ ಸಭೆ ನಡೆಸಲಾಗುವುದು. ಇಲಾಖಾವಾರು ಬಜೆಟ್‌ಪೂರ್ವ ಸಭೆಗಳನ್ನು ಆರಂಭಿಸುತ್ತೇನೆ ಎಂದು ಸಂಪುಟ ಸಹೋದ್ಯೋಗಿಗಳಿಗೆ ತಿಳಿಸಿದ್ದಾರೆ. ಇದೇ ವೇಳೆ, ಮಾರ್ಚ್‌ನಲ್ಲಿ ಬಜೆಟ್ ಮಂಡಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಬಿಬಿಎಂಪಿ ವ್ಯಾಪ್ತಿಯ ವೈಟ್ ಟಾಪಿಂಗ್ ರಸ್ತೆ ಕಾಮಗಾರಿ ಟೆಂಡರ್ ರದ್ದು ಸೇರಿ ಸಚಿವ ಸಂಪುಟದ ನಿರ್ಣಯಗಳು - KARNATAKA CABINET MEETING