ಬೆಂಗಳೂರು: ನಿಖಿಲ್ ಎರಡು ಬಾರಿ ಸೋತಿದ್ದರು ಆಗ ಅಭಿಮನ್ಯು ಆಗಿರಲಿಲ್ಲವಾ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.
ಅರಮನೆ ಮೈದಾನದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ನಿಖಿಲ್ ಅಭಿಮನ್ಯು ಅಲ್ಲ, ಅರ್ಜುನ ಆಗಿ ಬರುತ್ತಾನೆ ಎಂಬ ಹೆಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಎರಡು ಬಾರಿ ಚುನಾವಣೆಯಲ್ಲಿ ಸೋತಾಗ ನಿಖಿಲ್ ಅಭಿಮನ್ಯು ಆಗಿರಲಿಲ್ವಾ?. ಮಂಡ್ಯ, ರಾಮನಗರದಲ್ಲಿ ಸೋತಿದ್ದಾರೆ. ಈಗ ಇದ್ದಕ್ಕಿದ್ದಂತೆ ಅರ್ಜುನ ಆಗುತ್ತಾರಾ? ಎಂದು ಪ್ರಶ್ನಿಸಿದರು.
ಸಿಎಂ ಸಿದ್ದರಾಮಯ್ಯ (ETV Bharat) ಉಪಸಮರ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಗ್ರೆಸ್ ಎಲ್ಲಾ ಶಾಸಕರು, ಮಂತ್ರಿಗಳ ಜೊತೆ ಸಭೆ ನಡೆಸಿದ್ದೇನೆ. ಎಲ್ಲರೂ ಉಪ ಚುನಾವಣೆಗೆ ಒಟ್ಟಾಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಜೂಮ್ ಸಭೆಯಲ್ಲಿ ಮಂತ್ರಿಗಳ ಗೈರು ವಿಚಾರವಾಗಿ ಪ್ರತಿಕ್ರಿಯಿಸಿ, 13 ಮಂತ್ರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆ ಕೆಲವರು ಗೈರಾಗಿದ್ದಾರೆ ಎಂದರು.
ಇದನ್ನೂ ಓದಿ:ಶಾಸಕರು, ಮಂತ್ರಿಗಳೊಂದಿಗೆ ವಿಡಿಯೋ ಸಂವಾದ: ಒಗ್ಗಟ್ಟಿನಿಂದ ಕೆಲಸ ಮಾಡಿ, ಮೂರೂ ಕ್ಷೇತ್ರ ಗೆಲ್ಲುವಂತೆ ಸಿಎಂ-ಡಿಸಿಎಂ ಸೂಚನೆ