ಬೆಂಗಳೂರು:ಬಿಜೆಪಿಯವರು ಸರ್ವಾಧಿಕಾರ ಧೋರಣೆಯ ಮೇಲೆ ನಂಬಿಕೆ ಇರಿಸಿದ್ದು, ಸಂವಿಧಾನ ಬದಲಾವಣೆ ಮಾಡುವ ಒಳಸಂಚು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಗ್ರಾಹಕರ ವ್ಯವಹಾರಗಳು ಹಾಗೂ ಮಾಪನಶಾಸ್ತ್ರ ಇಲಾಖೆಯಿಂದ ಆಯೋಜಿಸಿದ್ದ ಆಹಾರಸೌಧ ಕಟ್ಟಡದ ಶಂಕುಸ್ಥಾಪನೆ ಸಮಾರಂಭ ನೆರವೇರಿಸಿ, ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಮುಂಚೆ ಕೇಂದ್ರ ಸಚಿವರಾಗಿದ್ದಾಗಲೂ ಈ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ ಎಂದರು.
ಸಂವಿಧಾನದ ಬಗ್ಗೆ ಅನಗತ್ಯವಾಗಿ ಮಾತಾನಾಡಿದ್ದಾರೆ. ಸಂವಿಧಾನದಲ್ಲಿ ಯಾವುದೇ ರೀತಿಯ ಬದಲಾವಣೆ ತರಬೇಕಾದರೆ ಕೇಂದ್ರ, ರಾಜ್ಯ ಸರ್ಕಾರಗಳ ಸದನಗಳಲ್ಲಿ ಮೂರನೇ 2ರಷ್ಟು ಬಹುಮತ ಇರಬೇಕು. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು ಬಹುಮತ ಬೇಕಾಗಿದೆ. ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಎಂಬುದು ಬಿಜೆಪಿಯ ಒಳಸಂಚು. ಆದ್ದರಿಂದ ಇಡೀ ದೇಶದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಬಿಜೆಪಿಯ ಈ ಯೋಚನೆಯನ್ನು ವಿರೋಧಿಸಬೇಕು. ಒಂದು ವೇಳೆ, ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ. ಆದ್ದರಿಂದ ನರೇಂದ್ರ ಮೋದಿಯವರು ತಮ್ಮ ಈ ಯೋಚನೆಯನ್ನು ಅನಂತಕುಮಾರ ಮೂಲಕ ಹೇಳಿಸುತ್ತಿದ್ದಾರೆ ಎಂದು ದೂರಿದರು.