ಕರ್ನಾಟಕ

karnataka

ETV Bharat / state

ರೇಣುಕಾಸ್ವಾಮಿ ಕೊಲೆ ಕೇಸ್: ಎಸ್​ಪಿಪಿ ಬದಲಾವಣೆಗೆ ಒತ್ತಡವಿಲ್ಲ, ಒತ್ತಡ ಹಾಕಿದರೆ ಕೇಳುವುದಿಲ್ಲ- ಸಿಎಂ - CM Siddaramaiah - CM SIDDARAMAIAH

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಗೆ ಪೊಲೀಸರಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೇ ವೇಳೆ ಎಸ್‌ಪಿಪಿ ಬದಲಾವಣೆಗೆ ಒತ್ತಡವಿರುವ ಕುರಿತ ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ.

CM SIDDARAMAIAH
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Jun 19, 2024, 3:41 PM IST

Updated : Jun 19, 2024, 5:27 PM IST

ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಶೇಷ ಸಾರ್ವಜನಿಕ ಅಭಿಯೋಜಕ(ಎಸ್​ಪಿಪಿ) ಅವರನ್ನು ಬದಲಾಯಿಸಲು ನನ್ನ ಮೇಲೆ ಯಾವುದೇ ಸಚಿವ, ಶಾಸಕರ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದ ನಂತರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು. ಕಾನೂನು ಏನು ಹೇಳುತ್ತದೋ ಅದನ್ನೇ ನಾವು ಮಾಡುತ್ತೇವೆ ಎಂದರು.

ಪೊಲೀಸರಿಗೆ ಈ ಪ್ರಕರಣದಲ್ಲಿ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ. ಎಸ್​ಪಿಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ:ತನಿಖಾಧಿಕಾರಿಗಳೆದುರು ಹೇಳಿಕೆ ದಾಖಲಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ - Vijayalakshmi Records Statements

Last Updated : Jun 19, 2024, 5:27 PM IST

ABOUT THE AUTHOR

...view details