ಕರ್ನಾಟಕ

karnataka

ETV Bharat / state

ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ - CM Siddaramaiah - CM SIDDARAMAIAH

ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗಳಿಗಿಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

CM Siddaramaiah
ಸಿಎಂ ಸಿದ್ದರಾಮಯ್ಯ (ETV Bharat Kannada)

By ETV Bharat Karnataka Team

Published : May 11, 2024, 2:28 PM IST

ಸಿಎಂ ಸಿದ್ದರಾಮಯ್ಯ (ETV Bharat Kannada)

ಮೈಸೂರು: 'ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿರೋಧ ಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಸಿಎಂ ಈ ರೀತಿಯಾಗಿ ಪ್ರತಿಕ್ರಿಯಿಸಿದರು.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ಭಾಷಣದಲ್ಲಿ ವಿರೋಧ ಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ. ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ. ರಾಜಕೀಯವಾಗಿ ವಿರೋಧ ಮಾಡ್ತಾರೆ. ಪ್ರಧಾನಿ ಕಳೆದ 10 ವರ್ಷಗಳಿಂದ ಬಡವರ ಪರವಾಗಿ ಕೆಲಸ ಮಾಡಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ದೇಶದಲ್ಲಿ ಪ್ರಧಾನ ಮಂತ್ರಿ ಅವರನ್ನು ಸೋಲಿಸಬೇಕು ಎಂಬುದೇ ವಿರೋಧ ಪಕ್ಷದವರ ಉದ್ದೇಶ.

ಕಳೆದ ಬಾರಿ ಪ್ರಧಾನಿಗೆ ಗೆಲ್ಲುವ ವಿಶ್ವಾಸವಿತ್ತು. ಆದರೆ ಈ ಬಾರಿ ಸೋಲಿನ ಭಯದಿಂದ ಹತಾಶರಾಗಿ ಮಾತನಾಡುತ್ತಿದ್ದಾರೆ. ಮೋದಿ ಅವರು ಸುಳ್ಳಿನ ಸರದಾರ ಎಂಬುದು ಜನರಿಗೆ ಗೊತ್ತಾಗಿದೆ. ಅವರ ಬಣ್ಣ ದೇಶದ ಜನರಿಗೆ ಗೊತ್ತಾಗಿದೆ. ಈ ಬಾರಿ ಸೋಲಿನ ಹತಾಶೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ. ಇವರ ಭಾವಾನಾತ್ಮಕ ಮಾತುಗಳು ಜನರಿಗೆ ಗೊತ್ತಾಗಿದೆ. ಮೇಲಕ್ಕೆ ಏರಿದವನು ಕೆಳಗೆ ಇಳಿಯಲೇಬೇಕು ಎಂದು ಪ್ರಧಾನಿ ಹೇಳಿಕೆಗೆ ಮುಖ್ಯಮಂತ್ರಿಗಳು ನೀಡಿದರು.

ಇದನ್ನೂ ಓದಿ:ರಾಮನಗರ: ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿದ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ - DIARRHEA

ಬಿಎಸ್​ವೈಗೆ ನೈತಿಕತೆ ಇಲ್ಲ: ರಾಜ್ಯದಲ್ಲಿ ಬರಗಾಲವಿದ್ದು, ರೈತರು ಸಂಕಷ್ಟದಲ್ಲಿ ಇದ್ದಾರೆ. ರೈತರ ಸಾಲಮನ್ನಾ ಮಾಡಬೇಕು ಎಂಬ ಬಿ.ಎಸ್ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ನಾವು ಹಿಂದೆ ಯಡಿಯೂರಪ್ಪನವರನ್ನು ಸಾಲಮನ್ನಾ ಮಾಡಿ ಎಂದು ಕೇಳಿದಾಗ, ನಮ್ಮ ಬಳಿ ಪ್ರಿಂಟಿಂಗ್ ಮಿಷನ್ ಇಲ್ಲ ಎಂದು ಹೇಳಿದ್ದರು. ಈಗ ರೈತರ ಸಾಲ ಮನ್ನಾ ಮಾಡಿ ಎಂದು ಹೇಳಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ:ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರೆಯುತ್ತೆ: ಬಿ ಎಸ್​ ಯಡಿಯೂರಪ್ಪ - JDS BJP Alliance Continue

ABOUT THE AUTHOR

...view details