ಕರ್ನಾಟಕ

karnataka

By ETV Bharat Karnataka Team

Published : Mar 13, 2024, 2:14 PM IST

ETV Bharat / state

ಸಿಎಎ ಜಾರಿಯು ಬಿಜೆಪಿಯ ಚುನಾವಣಾ ಗಿಮಿಕ್: ಸಿಎಂ ಸಿದ್ದರಾಮಯ್ಯ

ಸಿಎಎ ಕಾಯ್ದೆ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿಯಲ್ಲಿಂದು ಪ್ರತಿಕ್ರಿಯೆ ತಿಳಿಸಿದ್ದಾರೆ.

CM Siddaramaiah
ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ

ಉಡುಪಿ/ಮಂಗಳೂರು: ಸಿಎಎ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಟಿಯಿಂದ ಕೇಂದ್ರ ಸರ್ಕಾರ ಜಾರಿ ಮಾಡಿದೆ. ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ, ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಜಯಪ್ರಕಾಶ್ ಹೆಗ್ಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ. ಹಿಂದೆ ಅವರು ಕಾಂಗ್ರೆಸ್​ನಲ್ಲಿ ಸಂಸದರಾಗಿದ್ದರು. ಇದೀಗ ಮತ್ತೆ ಅವರು ಪಕ್ಷ ಸೇರ್ಪಡೆಯಾಗಿದ್ದಾರೆ. ಅವರಿಗೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ:ಪ್ರತಾಪ್ ಸಿಂಹಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಅಭಿಮಾನಿಗಳಿಂದ ಪ್ರತಿಭಟನೆ

ಇದೇ ವೇಳೆ, ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಬಿಜೆಪಿ ಕೈಗೊಂಡಿರುವ ಕಾರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಸಿಎಂ ಹೇಳಿದರು.

ಇದನ್ನೂ ಓದಿ:ಕಾರ್ಯಕರ್ತರು ಗೊಂದಲಕ್ಕೀಡಾಗದೆ, ಯಾರೇ ಸ್ಪರ್ಧಿಸಿದರೂ ಗೆಲುವಿಗೆ ಶ್ರಮಿಸಿ: ಬಿಜೆಪಿ ಮುಖಂಡರ ಮನವಿ

ABOUT THE AUTHOR

...view details