ಕರ್ನಾಟಕ

karnataka

ETV Bharat / state

ವರ್ಷ ಕಳೆದರೂ ಡಿಪಿಆರ್ ಆಗದ್ದಕ್ಕೆ ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ತೀವ್ರ ತರಾಟೆ - CM Siddaramaiah - CM SIDDARAMAIAH

ಸಿಎಂ ಸಿದ್ದರಾಮಯ್ಯ ಅವರು ಡಿಪಿಆರ್ ಆಗದೇ ಇದ್ದುದಕ್ಕೆ ಕಾರ್ಯದರ್ಶಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಳಂಬ ಧೋರಣೆ ವಿರುದ್ಧ ಸಿಎಂ ಗರಂ ಆಗಿದ್ದಾರೆ.

cm-siddaramaiah
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Jun 26, 2024, 3:29 PM IST

Updated : Jun 26, 2024, 4:28 PM IST

ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು : ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿಕಾರಿಗಳ ವಿಳಂಬ ಧೋರಣೆಗೆ ಗರಂ ಆಗಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕಾರ್ಯದರ್ಶಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಎಂಇಆರ್​ಸಿಗೆ CEPMIZ ಯೋಜನೆಯಡಿ ಒಟ್ಟು 24,996.30 ಕೋಟಿ ರೂ. ಒದಗಿಸಲಾಗಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಒದಗಿಸಲಾಗಿದೆ. ಇದರಲ್ಲಿ ಯೋಜನೆಗಳ ಆಯ್ಕೆ ಹಾಗೂ ಕಾಮಗಾರಿಗಳ ಪ್ರಗತಿಯ ಮೇಲ್ವಿಚಾರಣಾ ಪ್ರಾಧಿಕಾರ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಶ್ರೀ ಬಿ. ಸುದರ್ಶನ ರೆಡ್ಡಿ ಅವರು ಒಟ್ಟು 7928.78 ಕೋಟಿ ರೂ. ಮೊತ್ತದ 358 ಯೋಜನೆಗಳನ್ನು ಅನುಮೋದಿಸಿದ್ದಾರೆ.

ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆ (ETV Bharat)

ಈ ಪೈಕಿ ಒಟ್ಟು 3469.41 ಕೋಟಿ ರೂ. ವೆಚ್ಚದ 182 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 135 ಯೋಜನೆಗಳಿಗೆ ಟೆಂಡರ್‌ ಕರೆಯಲಾಗಿದ್ದು, 47 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. 23 ಕಾಮಗಾರಿಗಳನ್ನು ವಿವಿಧ ಸಂಸ್ಥೆಗಳಿಗೆ ವಹಿಸಲಾಗಿದೆ. ಈ ಯೋಜನೆಗಳ ಅನುಷ್ಠಾನಕ್ಕೆ ಒಂದು ವಾರದೊಳಗೆ ಡಿ.ಪಿ.ಆರ್ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳಿಗೆ ಸಿಎಂ ಸೂಚಿಸಿದರು.

ಯೋಜನೆಗಳ ಸಕಾಲಿಕ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಂಬಂಧಿಸಿದ ಇಲಾಖೆಯಲ್ಲಿ ಯೋಜನಾ ಮೇಲ್ವಿಚಾರಣೆ ಘಟಕ ಸ್ಥಾಪಿಸುವಂತೆ ಸೂಚಿಸಿದರು. ವರ್ಷ ಕಳೆದರೂ ಡಿಪಿಆರ್ ಆಗದೇ ಇದ್ದುದಕ್ಕೆ ಕಾರ್ಯದರ್ಶಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡ ಸಿಎಂ ಅಧಿಕಾರಿಗಳ ವಿಳಂಬ ಧೋರಣೆಗೆ ಗರಂ ಆಗಿ ಎಚ್ಚರಿಕೆ ನೀಡಿದರು.

ಸಿಎಂ ಸಿದ್ದರಾಮಯ್ಯ (ETV Bharat)

ಇದು ವಿಶೇಷ ಕಾರ್ಯಕ್ರಮವಾಗಿದ್ದು, ಟೆಂಡರ್​ನ ವಾಡಿಕೆಯ ಷರತ್ತುಗಳು ಅನ್ವಯಿಸುವುದಿಲ್ಲ. ಟೆಂಡರ್‌ನಲ್ಲಿ ನಿಗಮವು ವಾರದೊಳಗೆ ಬಿಲ್‌ ಪಾವತಿಸಲಾಗುವುದರಿಂದ ಯಾವುದೇ mobilization advance ನೀಡಲಾಗದು ಎಂಬುದನ್ನು ಗುತ್ತಿಗೆದಾರರಿಗೆ ಸ್ಪಷ್ಟಪಡಿಸಲು ಸಿಎಂ ಸೂಚಿಸಿದರು.

ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆ (ETV Bharat)

ರೈಲ್ವೆ ಯೋಜನೆಗಳಿಗೆ 5271.96 ಕೋಟಿ ರೂ. ಕುಡಿಯುವ ನೀರಿನ ಯೋಜನೆಗಳಿಗೆ 4929.84 ಕೋಟಿ ರೂ. ಆರೋಗ್ಯ ಕ್ಷೇತ್ರಕ್ಕೆ 1915.78 ಕೋಟಿ ರೂ. ಪರಿಸರ ಪುನಃಸ್ಥಾಪನೆಗೆ 2655.17 ಕೋಟಿ ರೂ. ರಸ್ತೆಗಳು ಮತ್ತು ಸಂವಹನ ಯೋಜನೆಗಳಿಗೆ 2559.17 ಕೋಟಿ ರೂ. ವಸತಿ ಯೋಜನೆಗಳಿಗೆ 1193.98 ಕೋಟಿ ರೂ. ನಿಗದಿ ಪಡಿಸಲಾಗಿದೆ. ವಸತಿ ಯೋಜನೆಗಳಡಿ ಫಲಾನುಭವಿಗಳನ್ನು ಶೀಘ್ರವೇ ಗುರುತಿಸಲು ಸೂಚಿಸಿದರು.

ಸಿಎಂ ಸಿದ್ದರಾಮಯ್ಯ (ETV Bharat)

ಸಣ್ಣ ನೀರಾವರಿ ಇಲಾಖೆ 14 ಯೋಜನೆಗಳ ಪೈಕಿ 7 ಯೋಜನೆಗಳ ಕಾಮಗಾರಿ ಆರಂಭಿಸಲಾಗಿದೆ. ಉಳಿದ 7 ಯೋಜನೆಗಳ ಟೆಂಡರ್ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ ಕಾಮಗಾರಿ ಅನುಷ್ಠಾನ‌ಮಾಡುವಂತೆ ಸಿಎಂ ಸೂಚಿಸಿದರು. ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಶಾಲೆಗಳ ಕಟ್ಟಡ ದುರಸ್ತಿ, ಕೊಠಡಿ, ಪ್ರಯೋಗಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.

ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಿಎಂ (ETV Bharat)

ಅಂಗನವಾಡಿ ಕಟ್ಟಡ, ವಿದ್ಯಾರ್ಥಿ ನಿಲಯಗಳು ಮತ್ತಿತರ ಯೋಜನೆಗಳಿಗೆ ಒತ್ತು ನೀಡಬೇಕು. ಲಭ್ಯವಿರುವ ಅನುದಾನದಲ್ಲಿ ಈ ನಾಲ್ಕೂ ಜಿಲ್ಲೆಗಳು ಮಾದರಿ ಜಿಲ್ಲೆಗಳಾಗಿ ಅಭಿವೃದ್ಧಿ ಮಾಡುವಂತೆ ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು. ಮುಂದಿನ ಸಭೆಯಲ್ಲಿ ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಹ ಭಾಗವಹಿಸುವಂತೆ ಸೂಚಿಸಿದರು.

ಸಿಎಂ ಸಿದ್ದರಾಮಯ್ಯ (ETV Bharat)

ಕಾಮಗಾರಿಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಯ ಗುಣಮಟ್ಟವನ್ನು ಖಾತರಿಪಡಿಸಬೇಕು ಎಂದರು. ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ ಅತೀಕ್‌, ಕಾರ್ಯದರ್ಶಿ ಡಾ. ಕೆ. ವಿ. ತ್ರಿಲೋಕಚಂದ್ರ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ :ಹಾಲಿನ ದರ ಹೆಚ್ಚಳವಾಗಿಲ್ಲ, ಹೋಟೆಲ್​ಗಳು ಕಾಫಿ, ಟೀ ದರ ಹೆಚ್ಚಿಸಲು ಹೇಗೆ ಸಾಧ್ಯ?: ಸಿಎಂ ಸಿದ್ದರಾಮಯ್ಯ - CM Siddaramaiah clarification

Last Updated : Jun 26, 2024, 4:28 PM IST

ABOUT THE AUTHOR

...view details