ಕರ್ನಾಟಕ

karnataka

ETV Bharat / state

ಸಿಎಂ ಸಿದ್ದರಾಮಯ್ಯ ಕೂಡಲೇ ಕ್ಷಮೆ ಕೇಳಬೇಕು : ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ - BASAVA JAYA MRUTHYUNJAYA SWAMIJI

ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಸಿಎಂ ಸಿದ್ದರಾಮಯ್ಯ ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

Basava-jaya-mruthyunjaya-swamiji
ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಇತರ ಸ್ವಾಮೀಜಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿರುವುದು (ETV Bharat)

By ETV Bharat Karnataka Team

Published : 5 hours ago

ಬೆಳಗಾವಿ :ಮೀಸಲಾತಿ ಕೊಡುವುದಿಲ್ಲ ಎಂದು ಹೇಳಿದ, ನಂಬಿಕೆ ದ್ರೋಹ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡೆಯನ್ನು ಖಂಡಿಸುತ್ತೇನೆ ಎಂದು ಕೂಡಲಸಂಗಮ ಪೀಠ ಹಾಗೂ ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಈ ಕುರಿತು ಈಟಿವಿ ಭಾರತದ ಜೊತೆ ಮಾತನಾಡಿದ ಅವರು, ಲಿಂಗಾಯತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲು ಹೇಳಿದ ಸಿಎಂ ಕೂಡಲೇ ಕ್ಷಮೆ ಕೇಳಬೇಕು, ನಮ್ಮ ಸಮಾಜದವರ ಮೇಲಿನ ಪೊಲೀಸ್ ಕೇಸ್​ ತೆಗೆಯಬೇಕು. ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕು ಎಂದು ಒತ್ತಾಯಿಸಿದರು.

ಪಂಚಮಸಾಲಿ ಮೀಸಲಾತಿ ಕೇಳುವುದು ಸಂವಿಧಾನಕ್ಕೆ ವಿರುದ್ಧ ಎಂಬ ಹೇಳಿಕೆಯನ್ನ ವಾಪಸ್ ಪಡೆದು, ಕಡತದಿಂದ ಅದನ್ನು ನಿರ್ಮೂಲನೆ ಮಾಡಬೇಕೆಂದು ಆಗ್ರಹಿಸಿ ಇವತ್ತಿನಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಪ್ರಾರಂಭಿಸಲು ತೀರ್ಮಾನ ಮಾಡಲಾಗಿದೆ ಎಂದರು.

ಈವರೆಗೆ ಬೆಳಗಾವಿ ಜಿಲ್ಲಾಧಿಕಾರಿ ಪ್ರತಿಭಟನೆಗೆ ಸ್ಪಷ್ಟವಾದ ಸ್ಥಳವನ್ನು ನೀಡಿಲ್ಲ. ಅದಕ್ಕೆ ನಾವೀಗ ಚೆನ್ನಮ್ಮ ಸರ್ಕಲ್​ಗೆ ಹೋಗಿ ಪ್ರತಿಭಟನೆ ಮಾಡುತ್ತೇವೆ. ಅಲ್ಲಿಂದ ಮತ್ತೆ ಗಾಂಧಿಭವನಕ್ಕೆ ಬರುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ :'ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡದಿದ್ದರೆ ಸುವರ್ಣಸೌಧಕ್ಕೆ ಮುತ್ತಿಗೆ' - BASAVA JAYA MRUTHYUNJAYA SWAMIJI

ABOUT THE AUTHOR

...view details