ಮಂಗಳೂರು (ದಕ್ಷಿಣ ಕನ್ನಡ) :ಬಿಜೆಪಿಯವರು ಅಭಿವೃದ್ಧಿ ವಿಚಾರದಲ್ಲಿ ಸುಳ್ಳು ಹೇಳ್ತಾರೆ. ಬಜೆಟ್ ಓದುವುದಿಲ್ಲ. ಅವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಹಿಂದೆ ನೀರಾವರಿಗೆ 16000 ಕೋಟಿ ರೂ. ಇಡಲಾಗುತ್ತಿತ್ತು. ಈ ವರ್ಷ 18 ಸಾವಿರ ಕೋಟಿ ರೂ. ಇಟ್ಟಿದ್ದೇವೆ. ನಾವು ಏನು ಮಾಡಿಲ್ಲ ಎಂದು ಬಿಜೆಪಿಯವರು ಹೇಳುವುದೆಂದರೆ ಏನು? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷವಾಗಿದೆ. ನಾವು ಏನೇನು ಮಾಡಿದ್ದೇವೆ ಎಂದು ಜನರಿಗೆ ತಿಳಿಸಿದ್ದೇವೆ. ಬಿಜೆಪಿಯವರು ಸುಳ್ಳು ಹೇಳುತ್ತಾರೆ ಎಂದು ಹೇಳಿದರು.