ಕರ್ನಾಟಕ

karnataka

ETV Bharat / state

ಕ್ಷುಲ್ಲಕ ವಿಚಾರಗಳ ಬಗ್ಗೆ ಉತ್ತರ ಕೋರಿ ರಾಜ್ಯಪಾಲರ ಪತ್ರ : ಸಿಎಂ ಸಿದ್ದರಾಮಯ್ಯ ಅಸಮಾಧಾನ - CM Siddaramaiah

ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರ ಪತ್ರದ ಕುರಿತು ಮಾತನಾಡಿದರು. ಕ್ಷುಲ್ಲಕ ವಿಚಾರಗಳ ಬಗ್ಗೆ ರಾಜ್ಯಪಾಲರು ಉತ್ತರ ಕೇಳುವುದು ಸರಿಯಲ್ಲ ಎಂದು ಹೇಳಿದರು.

cm-siddaramaiah
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Sep 23, 2024, 3:11 PM IST

ಬೆಂಗಳೂರು :ರಾಜ್ಯಪಾಲರ ನಡೆಗೆ ಸಂಬಂಧಿಸಿದಂತೆ ರಾಷ್ಟ್ರಪತಿಗಳಿಗೆ ದೂರು ಕೊಡುವ ವಿಚಾರ ಇದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯಪಾಲರು ಸಣ್ಣ ವಿಷಯಗಳ ಬಗ್ಗೆ ಗಮನ ಕೊಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸೌಧದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದಲ್ಲಿ ಸಹಿ ಮಾಡುತ್ತಿಲ್ಲವೆಂಬ ಸಣ್ಣ ವಿಷಯದ ಬಗ್ಗೆಯೂ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದು ವರದಿ ಕೇಳುವ ಬಗ್ಗೆ ಪ್ರಸ್ತಾಪಿಸಿ, ಕನ್ನಡದಲ್ಲಿರುವ ಪತ್ರಗಳಿಗೆ ಕನ್ನಡದಲ್ಲಿ ಹಾಗೂ ಆಂಗ್ಲದಲ್ಲಿರುವ ಪತ್ರಗಳಿಗೆ ಆಂಗ್ಲದಲ್ಲಿ ಸಹಿ ಮಾಡುವುದು ತಪ್ಪಲ್ಲ. ಇಂತಹ ಕ್ಷುಲ್ಲಕ ವಿಚಾರಗಳ ಬಗ್ಗೆ ರಾಜ್ಯಪಾಲರು ಉತ್ತರ ಕೇಳುವುದು ಸರಿಯಲ್ಲ ಎಂದರು.

ಸಿಎಂ ಸಿದ್ದರಾಮಯ್ಯ (ETV Bharat)

ಅರ್ಕಾವತಿಗೆ ಸಂಬಂಧಿಸಿದ ರಾಜ್ಯಪಾಲರ ಪತ್ರ- ಪರಿಶೀಲಿಸಿ ಕ್ರಮ : ರಾಜ್ಯಪಾಲರು ಅರ್ಕಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿಯವರು ಹಿಂದೆ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ವಿಷಯವನ್ನು ಏಕೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿಯವರು ರಾಜ್ಯಪಾಲರಿಗೆ ಈಗ ಪತ್ರ ಬರೆದಿದ್ದು, ಹಿಂದೆ ಅವರು ಸಚಿವರಾಗಿದ್ದಾಗ ಕ್ರಮವನ್ನೇಕೆ ತೆಗೆದುಕೊಳ್ಳಲಿಲ್ಲ ಎಂದು ಮರುಪ್ರಶ್ನಿಸಿದರು. ರಾಜ್ಯಪಾಲರ ಪತ್ರವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅಪಘಾತಕ್ಕೊಳಗಾದವರ ಜೀವ ಉಳಿಸುವಲ್ಲಿ ಸಹಕಾರಿ : ಇಂದು ಆಪತ್ಕಾಲ ಯಾನ ಸೇವೆ ಯೋಜನೆಯಡಿ ಲೋಕಾರ್ಪಣೆಯಾಗಿರುವ 65 ಅತ್ಯಾಧುನಿಕ ಆಂಬ್ಯುಲೆನ್ಸ್​ಗಳ ಸೇವೆಗಳು ಅಪಘಾತಕ್ಕೊಳಗಾದವರ ಜೀವ ಉಳಿಸುವಲ್ಲಿ ಸಹಕಾರಿಯಾಗಿವೆ ಎಂದು ಸಿಎಂ ತಿಳಿಸಿದರು.

26 ಸುಧಾರಿತ ಹಾಗೂ 39 ಬೇಸಿಕ್ ಲೈಫ್ ಸಪೋರ್ಟ್ ಆಂಬ್ಯುಲೆನ್ಸ್​ಗಳನ್ನು ಇಂದು ಜನರ ಸೇವೆಗೆ ಮುಕ್ತಗೊಳಿಸಲಾಗಿದ್ದು, ಇವುಗಳನ್ನು ರಾಜ್ಯದ ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ :ರಾಜ್ಯಪಾಲರ ನಡವಳಿಕೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ: ಪರಮೇಶ್ವರ್ - G Parameshwar

ABOUT THE AUTHOR

...view details