ಮೈಸೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ದಿನಗಳ ಕಾಲ ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಹಿನ್ನೀರು ಭಾಗದಲ್ಲಿರುವ ರೆಸಾರ್ಟ್ನಲ್ಲಿ ಮೂರು ದಿನಗಳ ಕಾಲ ವಾಸ್ತವ್ಯ ಹೂಡಲಿದ್ದಾರೆ. ಲೋಕಸಭೆ ಚುನಾವಣೆ ಗೆಲ್ಲಲು ಕಾರ್ಯತಂತ್ರ ರೂಪಿಸಲು ಆಪ್ತರು ಹಾಗೂ ಶಾಸಕರ ಜೊತೆ ಚರ್ಚಿಸುವ ಸಾಧ್ಯತೆಯಿದೆ. ಸಿದ್ದರಾಮಯ್ಯ ಭಾನುವಾರದಿಂದ ಬುಧವಾರವರೆಗೆ ರೆಸಾರ್ಟ್ನಲ್ಲಿಯೇ ತಂಗಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ನೇರವಾಗಿ ಮೈಸೂರು ನಗರದ ಖಾಸಗಿ ಹೋಟೆಲ್ನಲ್ಲಿ ಮೈಸೂರು- ಕೊಡಗು ಹಾಗೂ ಚಾಮರಾಜನಗರದ ಕಾಂಗ್ರೆಸ್ ಜನಪ್ರತಿನಿಧಿಗಳು ಮತ್ತು ಪದಾಧಿಕಾರಿಗಳ ಸಭೆಯನ್ನು ಸಂಜೆವರೆಗೆ ನಡೆಸಿದರು. ಸಂಜೆ ಹೋಟೆಲ್ನಿಂದ ನೇರವಾಗಿ ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಹಿನ್ನೀರು ಭಾಗದಲ್ಲಿರುವ ರೆಸಾರ್ಟ್ಗೆ ಹೋದ ಮುಖ್ಯಮಂತ್ರಿಗಳು ಭಾನುವಾರ ರಾತ್ರಿ, ಸೋಮವಾರ, ಹಾಗೂ ಮಂಗಳವಾರ ರೆಸಾರ್ಟ್ನಲ್ಲಿಯೇ ವಾಸ್ತವ್ಯ ಹೂಡುವ ಮುಖ್ಯಮಂತ್ರಿಗಳು ರೆಸಾರ್ಟ್ನಲ್ಲಿ ಮೈಸೂರು, ಮಡಿಕೇರಿ ಹಾಗೂ ಚಾಮರಾಜನಗರ ಜಿಲ್ಲೆಯ ಪ್ರಮುಖ ನಾಯಕರು ಹಾಗೂ ಶಾಸಕರ ಸಭೆ ಹಾಗೂ ಎರಡು ಕ್ಷೇತ್ರಗಳನ್ನು ಗೆಲ್ಲುವ ಬಗ್ಗೆ ಕಾರ್ಯ ತಂತ್ರ ರೂಪಿಸಲಿದ್ದಾರೆ ಎಂದು ಮಾಹಿತಿ ಮೂಲಗಳಿಂದ ಖಚಿತವಾಗಿದೆ.
ಮುಖ್ಯಮಂತ್ರಿಗಳ ಜೊತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಡಾ. ಹೆಚ್.ಸಿ. ಮಹದೇವಪ್ಪ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ಅರಣ್ಯ ಮತ್ತು ವಸತಿ ವಿಹಾರಗಳ ನಿಗಮದ ಅಧ್ಯಕ್ಷ ಮತ್ತು ಹೆಚ್.ಡಿ. ಕೋಟೆಯ ಶಾಸಕ ಅನಿಲ್ ಚಿಕ್ಕಮಾದು, ಮುಖ್ಯಮಂತ್ರಿಗಳ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸಿಎಂ ಜೊತೆ ರೆಸಾರ್ಟ್ನಲ್ಲಿದ್ದಾರೆ.