ಕರ್ನಾಟಕ

karnataka

ETV Bharat / state

2ನೇ ಅವಧಿಯಲ್ಲಿ ನಾಲ್ಕನೇ ಬಾರಿ ಚಾಮರಾಜನಗರಕ್ಕೆ ಸಿದ್ದರಾಮಯ್ಯ ಭೇಟಿ - Siddaramaiah Visit Chamaraganagar - SIDDARAMAIAH VISIT CHAMARAGANAGAR

ಸಿಎಂ ಸಿದ್ದರಾಮಯ್ಯ 2ನೇ ಅವಧಿಯಲ್ಲಿ ನಾಲ್ಕನೇ ಬಾರಿಗೆ ಗಡಿಜಿಲ್ಲೆ ಚಾಮರಾಜನಗರಕ್ಕೆ ಭೇಟಿ ನೀಡುತ್ತಿದ್ದಾರೆ.

siddaramaiah
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Jul 8, 2024, 3:26 PM IST

ಚಾಮರಾಜನಗರ :ಚಾಮರಾಜನಗರಕ್ಕೆ ಈ ಹಿಂದೆ ಮುಖ್ಯಮಂತ್ರಿಗಳಾದವರು ಬರಲು ಹಿಂದೇಟು ಹಾಕಿದರೆ, ಸಿದ್ದರಾಮಯ್ಯ ಮಾತ್ರ ಮೌಢ್ಯಕ್ಕೆ ಸೊಪ್ಪು ಹಾಕದೆ, ಎರಡನೇ ಸಿಎಂ ಅವಧಿಯಲ್ಲಿ ನಾಲ್ಕನೇ ಬಾರಿಗೆ ಗಡಿಜಿಲ್ಲೆಗೆ ಬುಧವಾರದಂದು ಭೇಟಿ ಕೊಡಲಿದ್ದಾರೆ.

ಸಿಎಂ ಆದ ಮೂರು ತಿಂಗಳಿಗೆ ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಅವರು ಕೆಡಿಪಿ ಸಭೆ ನಡೆಸಿದ್ದರು. ಬಳಿಕ ಎರಡನೇ ಬಾರಿಗೆ ಸಿದ್ದರಾಮಯ್ಯ ಚಾಮರಾಜನಗರದ ಡಾ. ಬಿ. ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ನಡೆಸಿದ್ದರು.

ತದನಂತರ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ರೋಡ್ ಶೋ ನಡೆಸಿ, ಮತದಾರರ ಮನ ಗೆದ್ದಿದ್ದರು. ಈಗ ನಾಲ್ಕನೇ ಸಲ ಚಾಮರಾಜನಗರಕ್ಕೆ ಭೇಟಿ ಕೊಡುತ್ತಿದ್ದಾರೆ.

ಕೃತಜ್ಞತಾ ಸಭೆ : ಜುಲೈ 10ಕ್ಕೆ ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತಾ ಸಲ್ಲಿಕೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಪ್ರವಾಸ ಕಾರ್ಯಕ್ರಮ (ETV Bharat)

ಜುಲೈ 10ರ ಬೆಳಗ್ಗೆ 11.10ಕ್ಕೆ ಚಾಮರಾಜನಗರಕ್ಕೆ ಸಿಎಂ ಆಗಮಿಸಲಿದ್ದು, ಗೃಹಸಚಿವ ಡಾ. ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ಸಚಿವರಾದ ಹೆಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಹಾಗೂ ಸಂಸದ ಸುನಿಲ್ ಬೋಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಸಿಎಂ ಲೋಕಸಭಾ ಕ್ಷೇತ್ರ: ಕೃತಜ್ಞತಾ ಸಭೆಯಲ್ಲಿ 30 ಸಾವಿರಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದ್ದು, ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 3.30ಕ್ಕೆ ಸಿಎಂ ವಾಪಸ್ಸಾಗಲಿದ್ದಾರೆ. ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರವೂ ಕೂಡ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ.

ಮೊದಲ ಅವಧಿಯಲ್ಲಿ 15ಕ್ಕೂ ಹೆಚ್ಚು ಬಾರಿ ಭೇಟಿ: ಮೊದಲ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ 15ಕ್ಕೂ ಅಧಿಕ ಬಾರಿ ಭೇಟಿ ಕೊಟ್ಟು, 5 ವರ್ಷ ಸುಭದ್ರವಾಗಿ ಆಡಳಿತ ನಡೆಸಿ ಚಾಮರಾಜನಗರಕ್ಕೆ ಅಂಟಿದ್ದ ಮೌಢ್ಯ ಅಳಿಸಿದ್ದರು. ಭೇಟಿ ನೀಡುವ ಜೊತೆಗೆ ಸಾವಿರಾರು ಕೋಟಿ ಅನುದಾನವನ್ನೂ ಗಡಿಜಿಲ್ಲೆಗೆ ನೀಡಿದ್ದರು‌.

ಇದನ್ನೂ ಓದಿ :ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ: ಸಿಎಂ - CM Siddaramaiah

ABOUT THE AUTHOR

...view details