ಬೆಂಗಳೂರು:ಸಿಎಂ ಸಿದ್ದರಾಮಯ್ಯ ಅವರು ತವರು ಜಿಲ್ಲೆಯಾದ ಮೈಸೂರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್ ನೀಡಿದ್ದಾರೆ. ನಗರದಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯನ್ನು 100 ಹಾಸಿಗೆಗೆ ಉನ್ನತೀಕರಿಸಲಾಗಿದೆ. ಕೆ.ಆರ್ ಆಸ್ಪತ್ರೆ ಆವರಣದಲ್ಲಿ 75 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.
ತವರು ಜಿಲ್ಲೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗಿಫ್ಟ್: ಏನೇನು ಕೊಟ್ಟಿದ್ದಾರೆ ಗೊತ್ತಾ? - ಸಿದ್ದರಾಮಯ್ಯ
ತವರು ಜಿಲ್ಲೆಯಾದ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಕೃಪಾಕಟಾಕ್ಷ ತೋರಿದ್ದಾರೆ. ಹಲವು ಯೋಜನೆಗಳಿಗಾಗಿ ಹೆಚ್ಚಿನ ಅನುದಾನ ಬಜೆಟ್ನಲ್ಲಿ ಮೀಸಲಿಟ್ಟಿದ್ದಾರೆ.

ಸಿದ್ದರಾಮಯ್ಯ ಭರ್ಜರಿ ಗಿಫ್ಟ್
Published : Feb 16, 2024, 12:04 PM IST
ಜೊತೆಗೆ 56 ಕೋಟಿ ರೂಪಾಯಿ ವೆಚ್ಚದಲ್ಲಿ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ, 116 ಕೋಟಿ ರೂ ವೆಚ್ಚದಲ್ಲಿ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಸ್ಟೆಲ್ ನಿರ್ಮಾಣಕ್ಕೆ ಅನುದಾನ ಮೀಸಲಿಟ್ಟಿದ್ದಾರೆ.
ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯರಿಂದ ಆದಾಯ ಕೊರತೆಯ ಬಜೆಟ್ ಮಂಡನೆ: 1,05,246 ಕೋಟಿ ರೂ. ಸಾಲದ ಮೊರೆ