ಕರ್ನಾಟಕ

karnataka

ETV Bharat / state

ಮೈಕ್ರೋ ಫೈನಾನ್ಸ್​​​​​​​ ಕಿರುಕುಳ: 2-3 ದಿನಗಳಲ್ಲಿ ಸುಗ್ರೀವಾಜ್ಞೆ ಬಗ್ಗೆ ಅಂತಿಮ ತೀರ್ಮಾನ- ಸಚಿವ ಪರಮೇಶ್ವರ್ - ORDINANCE ON MICRO FINANCE

ಸಿಎಂ ಸಿದ್ದರಾಮಯ್ಯನವರು ಮುಂದಿನ 2-3 ದಿನಗಳಲ್ಲಿ ಮೈಕ್ರೋ ಫೈನಾನ್ಸ್​​​​​​​ ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

HOME MINISTER G PARAMESHWARA  BENGALURU  ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ  MICRO FINANCE
ಗೃಹ ಸಚಿವ ಜಿ.ಪರಮೇಶ್ವರ್ (ETV Bharat)

By ETV Bharat Karnataka Team

Published : Jan 31, 2025, 2:24 PM IST

ಬೆಂಗಳೂರು:"ಇನ್ನೆರಡು ಮೂರು ದಿನಗಳಲ್ಲಿ ಮೈಕ್ರೋ ಫೈನಾನ್ಸ್​​​​​​​ ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆ ಬಗ್ಗೆ ಸಿಎಂ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ" ಎಂದು ಗೃಹ ಸಚಿವ ಜಿ.ಪರಮೇಶ್ವರ್​​​ ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿಂದು ಮಾತನಾಡಿದ ಅವರು​​, ಮೈಕ್ರೋ ಫೈನಾನ್ಸ್​​​​​​​ ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆ ವಿಳಂಬವಾಗುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿ, "ಇನ್ನೆರಡು ಮೂರು ದಿನಗಳಲ್ಲಿ ಸುಗ್ರೀವಾಜ್ಞೆ ಬಗ್ಗೆ ಅಂತಿಮ ತಿರ್ಮಾನವನ್ನು ಸಿಎಂ ತಗೋತಾರೆ. ಸಿಎಂ ಅಧಿಕಾರಿಗಳ ತಂಡ ರಚನೆ ಮಾಡಿದ್ದಾರೆ. ಕಾನೂನು, ಸಂಸದೀಯ ವ್ಯವಹಾರ, ಆರ್ಥಿಕ‌ ಇಲಾಖೆ ಅಧಿಕಾರಿಗಳ ತಂಡ ರಚನೆ ಮಾಡಿದ್ದಾರೆ. ಈಗಾಗಲೇ ಹಲವು ಕಾನೂನುಗಳಿವೆ ಈ ಕಾನೂನುಗಳ ಅಧ್ಯಯನ ನಡೆಸಿ ಹೊಸ ಕಾನೂನು ಮಾಡಲಾಗುತ್ತದೆ" ಎಂದರು.

ಗೃಹ ಸಚಿವ ಜಿ.ಪರಮೇಶ್ವರ್ ಮಾಧ್ಯಮ ಪ್ರತಿಕ್ರಿಯೆ (ETV Bharat)

"ಮೈಕ್ರೋ ಫೈನಾನ್ಸ್ ಕುರಿತ ಸುಗ್ರೀವಾಜ್ಞೆ ಸ್ವರೂಪ ಬಗ್ಗೆ ಇನ್ನೆರಡು ಮೂರು ದಿನಗಳಲ್ಲಿ ಅಂತಿಮಗೊಳಿಸಿ ನಂತರ ಸುಗ್ರೀವಾಜ್ಞೆ ಹೊರಡಿಸಲಾಗುತ್ತದೆ. ಯಾವಾಗ ಸುಗ್ರೀವಾಜ್ಞೆ ಹೊರಡಿಸಬೇಕು ಅಂತ ಸಮಯ ನಿಗದಿಗೊಳಿಸಿಲ್ಲ. ಜನರಿಗೆ ಕಿರುಕುಳ ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ, ಆತ್ಮಹತ್ಯೆ, ಊರು ಬಿಡುವ ಘಟನೆಗಳು ಆಗುತ್ತಿವೆ. ಇದು ನಿಲ್ಲಬೇಕು, ನೋಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೂ ಕಡಿವಾಣ ಹಾಕಬೇಕು. ನಮ್ಮ ಊರಿನಲ್ಲಿ ಎರಡೂವರೆ ಲಕ್ಷ ಕೊಟ್ಟು ನಾಲ್ಕೂವರೆ ಲಕ್ಷ ವಸೂಲು ಮಾಡಿದ್ದಾರೆ" ಎಂದು ಹೇಳಿದರು.

"ಆ ಮನೆಯವರು ಮನೆ ಬಿಟ್ಟು ಹೋಗಿದ್ದಾರೆ. ಇದು ನನ್ನ ಗಮನಕ್ಕೆ ಬಂದು ಸ್ಥಳಕ್ಕೆ ಅಧಿಕಾರಿಗಳನ್ನು ಕಳಿಸಿದ್ದೆ. ಈಗ ಆ‌ ಮನೆಯವರು ಬಂದಿದ್ದಾರೆ.‌ ನಾನೀಗ ಅಲ್ಲಿಗೇ ಹೋಗುತ್ತಿದ್ದೇನೆ. ಕಾನೂನು ಮೂಲಕ ಕಿರುಕುಳ ನಿಯಂತ್ರಣ ಮಾಡೋದು ನಮ್ಮ ಉದ್ದೇಶ. ನಾವು ತರುವ ಕಾನೂನನ್ನು ಕೋರ್ಟಿನಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳು ಪ್ರಶ್ನೆ ಮಾಡದಂತೆ ರೂಪಿಸುತ್ತೇವೆ. ಬೇರೆ ರಾಜ್ಯಗಳ ಕಾನೂನು ಅಧ್ಯಯನ ಮಾಡಿ ಹೊಸ ಕಾನೂನು ತರುತ್ತೇವೆ" ಎಂದು ತಿಳಿಸಿದರು.

ದಲಿತ ಸಚಿವರ ಸಭೆ ಮಾಡಿಲ್ಲ:"ನಿನ್ನೆ ಸಂಪುಟ ಸಭೆ ನಂತರ ನಾನು ಯಾವ ದಲಿತ ಸಚಿವರ ಸಭೆಯನ್ನೂ ಮಾಡಲಿಲ್ಲ. ಎಸ್ಟಿ ಸಮುದಾಯದ ರಾಜನಹಳ್ಳಿ ಸ್ವಾಮೀಜಿಗಳು ಜಾತ್ರೆಗೆ ಕರೆಯಲು ನನ್ನ ಕೊಠಡಿಗೆ ಬಂದಿದ್ದರು. ಸ್ವಾಮೀಜಿಯವರು ಬಂದಿದ್ದಾರೆ ಅಂತ ತಿಳಿದು ಸಚಿವರಾದ ರಾಜಣ್ಣ, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ ಸಹ ಬಂದಿದ್ದರು. ನಾವೆಲ್ಲರೂ ಸ್ವಾಮೀಜಿಗಳ ಆಶೀರ್ವಾದ ಪಡೆದೆವು" ಎಂದು ಹೇಳಿದರು.

ಕೊನೆಗೆ, ನಿಗಮ ಮಂಡಳಿಗಳಿಗೆ ಕಾರ್ಯಕರ್ತರ ನೇಮಕ ವಿಚಾರವಾಗಿ ಮಾತನಾಡಿ, "ನಾವು ಪಟ್ಟಿ ಸಿದ್ಧಪಡಿಸಿ ಸಿಎಂಗೆ ಕೊಟ್ಟಿದ್ದೇವೆ. ಸಿಎಂ ಬಳಿ ಪಟ್ಟಿ ಇದೆ. ಅವರೇ ತೀರ್ಮಾನ ತಗೋತಾರೆ" ಎಂದರು.

ಇದನ್ನೂ ಓದಿ:ನನ್ನ ಹಾಗೂ ಸರ್ಕಾರದ ತೇಜೋವಧೆಗೆ ಇದನ್ನೆಲ್ಲ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ABOUT THE AUTHOR

...view details