ಬೆಂಗಳೂರು :ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ಹೆಚ್ಚಾಗುತ್ತಿದೆ.
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮನೆ ಹೊರಗೆ ಮೈನಡುಗಿಸುವ ಚಳಿ ಅನುಭವವಾಗುತ್ತಿದೆ. ಒಂದು ವಾರದಿಂದ ರಾಜಧಾನಿ ಬೆಂಗಳೂರಿನಲ್ಲಿ ಚಳಿ ಜೊತೆಗೆ ಇಬ್ಬನಿ ಪ್ರಮಾಣ ಹೆಚ್ಚಿದೆ.
ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು, ಮೈನಡುಗಿಸುವ ಚಳಿ ಅನುಭವಕ್ಕೆ ಬರುತ್ತಿದೆ. ದಪ್ಪನೆಯ ಬೆಡ್ ಶೀಟ್ ಹೊದ್ದು ಮನೆಯಲ್ಲೇ ಮಲಗುವಷ್ಟರ ಮಟ್ಟಿಗೆ ಎಂದು ಮನಸಿಗೆ ಅನಿಸುವಷ್ಟರ ಮಟ್ಟಿಗೆ ಚಳಿಯ ವಾತಾವರಣ ರಾಜಧಾನಿಯಲ್ಲಿ ಕಂಡು ಬರುತ್ತಿದೆ.
ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಚಳಿ, ಇಬ್ಬನಿ ಪ್ರಮಾಣ ಏರಿಕೆ ಕಂಡಿದೆ. ಮುಂದಿನ ವಾರ ಕನಿಷ್ಠ ತಾಪಮಾನ 10 ರಿಂದ 12 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗುವ ಮುನ್ಸೂಚನೆ ಕೂಡ ಇರುವುದರಿಂದ ಬೆಂಗಳೂರಿನಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಚಳಿಗಾಲ ತುಸು ಹೆಚ್ಚು ಇರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಸಾಮಾನ್ಯ ಉಷ್ಣಾಂಶಕ್ಕಿಂತ 3.5 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಕೊಡಗು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲೂ ಸಹ ಕನಿಷ್ಠ ಉಷ್ಣಾಂಶ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್ ಎಎಲ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ಲಾಣದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಆರೋಗ್ಯದ ಮೇಲೆ ನಿಗಾ : ಚಳಿ ಹಾಗೂ ಇಬ್ಬನಿ ಹೆಚ್ಚಾಗಿರುವ ಕಾರಣ ವೃದ್ಧರು, ಮಕ್ಕಳು ಹೆಚ್ಚು ಆರೋಗ್ಯದ ಮೇಲೆ ನಿಗಾ ವಹಿಸಬೇಕು. ಈ ಚಳಿಯ ವಾತಾವರಣದಿಂದ ನೆಗಡಿ, ಕೆಮ್ಮು, ಜ್ವರದಂತಹ ಲಕ್ಷಣಗಳು ಕಂಡು ಬರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಉತ್ತಮ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಇದನ್ನೂ ಓದಿ :ದೆಹಲಿಗೆ ದಟ್ಟ ಮಂಜಿನ ಹೊದಿಕೆ: 100ಕ್ಕೂ ಹೆಚ್ಚು ವಿಮಾನ, ರೈಲು ಹಾರಾಟದಲ್ಲಿ ವ್ಯತ್ಯಯ - DELHI NCR WRAPPED IN FOG BLANKET