ಶಿವಮೊಗ್ಗ:ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಬಳಿ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಆಯನೂರು ಕಡೆಯಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಶಿಫ್ಟ್ ಕಾರು ಹಾಗೂ ಕಿಮ್ಮನೆ ಗಾಲ್ಫ್ ಕ್ಲಬ್ನಿಂದ ಹೊರಟಿದ್ದ ಇನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮೃತರನ್ನು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಬೆಳವನೂರು ಗ್ರಾಮದವರು ಎಂದು ಗುರುತಿಸಲಾಗಿದೆ. ಕಾರಿನ ಚಾಲಕ ಚಂದ್ರು, ಸಿದ್ದಣ್ಣ ಹಾಗೂ ಇಮಾನ್ ಸಾಬ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇನೋವಾ ಕಾರಿನಲ್ಲಿದ್ದವರು ವಿದೇಶಿ ಪ್ರವಾಸಿಗರು ಎಂದು ತಿಳಿದು ಬಂದಿದೆ.