ಕರ್ನಾಟಕ

karnataka

ETV Bharat / state

ಬಾಗಲಕೋಟೆ: ಶಾಲಾ ವಾಹನ-ಟ್ರ್ಯಾಕ್ಟರ್ ಡಿಕ್ಕಿ, ನಾಲ್ವರು ವಿದ್ಯಾರ್ಥಿಗಳು ಸಾವು - ಶಾಲಾ ವಾಹನ ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿ

ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

school vehicle and tractor  students died  ಶಾಲಾ ವಾಹನ ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿ  ವಿದ್ಯಾರ್ಥಿಗಳು ಸಾವು
ನಾಲ್ವರು ವಿದ್ಯಾರ್ಥಿಗಳು ಸಾವು, ಎಂಟು ಮಕ್ಕಳಿಗೆ ಗಾಯ

By ETV Bharat Karnataka Team

Published : Jan 29, 2024, 7:36 AM IST

ಬಾಗಲಕೋಟೆ:ಶಾಲಾ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಎಂಟಕ್ಕೂ ಅಧಿಕ ಮಕ್ಕಳು ಗಾಯಗೊಂಡಿದ್ದಾರೆ. ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರ ಗ್ರಾಮದ ಬಳಿ ಕಳೆದ ರಾತ್ರಿ ಘಟನೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಲಗೂರು ಗ್ರಾಮದ ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ ಮುಗಿಸಿ ವಾಪಸ್ ಊರಿಗೆ ಮರಳುತ್ತಿದ್ದಾಗ ತಡರಾತ್ರಿ 12 ಗಂಟೆಯ ಸುಮಾರಿಗೆ ಅಪಘಾತವಾಗಿದೆ ಎಂದು ತಿಳಿದುಬಂದಿದೆ. ಮೃತರನ್ನು ಕವಟಗಿ ಗ್ರಾಮದ ಗೋವಿಂದ ಜಂಬಗಿ (13), ಸಾಗರ ಕಡಕೋಳ (17), ಶ್ವೇತಾ ಪಾಟಿಲ್ (16), ಬಸವರಾಜ ಕೊಟಗಿ (17) ಎಂದು ಗುರುತಿಸಲಾಗಿದೆ.

ಕಾರ್ಯಕ್ರಮ ಮುಗಿಸಿ ಕವಟಗಿ ಗ್ರಾಮದ‌ ಕಡೆ ಹೊರಟಿದ್ದಾಗ ಎದುರಿನಿಂದ ಬಂದ ಟ್ರ್ಯಾಕ್ಟರಿಗೆ ಶಾಲಾ ವಾಹನ ಡಿಕ್ಕಿಯಾಗಿದೆ. ಜಮಖಂಡಿ ಗ್ರಾಮೀಣ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಇದನ್ನೂ ಓದಿ:ಕಸಕ್ಕೆ ಬೆಂಕಿ ಕೊಡಲು ಹೋದ ವೇಳೆ ಭಾರಿ ಅವಘಡ: ಬಂಟ್ವಾಳದಲ್ಲಿ ದಂಪತಿ ಸಜೀವದಹನ

ABOUT THE AUTHOR

...view details