ಕರ್ನಾಟಕ

karnataka

ETV Bharat / state

ಐಪಿಎಸ್ ಅಧಿಕಾರಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ನಿಯೋಗದಿಂದ ಸಿಎಸ್​ಗೆ ದೂರು; ಅಮಾನತಿಗೆ ಒತ್ತಾಯ - JDS Complaint Against ADGP - JDS COMPLAINT AGAINST ADGP

ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾದಳದ ಮುಖ್ಯಸ್ಥ ಎಡಿಜಿಪಿ ಎಂ.ಚಂದ್ರಶೇಖರ್ ಅವರನ್ನು ಕೂಡಲೇ ಭಾರತೀಯ ಸೇವೆಯಿಂದ ಅಮಾನತುಗೊಳಿಸಿ, ಉನ್ನತ ಮಟ್ಟದ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯಕ್ಕೆ ಸೂಕ್ತ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಶಿಫಾರಸಿನೊಂದಿಗೆ ಕಳುಹಿಸಲು ಜೆಡಿಎಸ್ ನಿಯೋಗ ಒತ್ತಾಯಿಸಿದೆ.

COMPLAINT AGAINST ADGP
ಜೆಡಿಎಸ್ ನಿಯೋಗ (ETV Bharat)

By ETV Bharat Karnataka Team

Published : Sep 30, 2024, 1:42 PM IST

Updated : Sep 30, 2024, 2:27 PM IST

ಬೆಂಗಳೂರು:ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ನೇತೃತ್ವದ ಜೆಡಿಎಸ್ ನಿಯೋಗ ಮುಖ್ಯ ಕಾರ್ಯದರ್ಶಿ ಅವರಿಗೆ ದೂರು ನೀಡಿ, ಅಮಾನತುಗೊಳಿಸುವಂತೆ ಒತ್ತಾಯಿಸಿದೆ.

ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರದಲ್ಲಿ ಎಂ.ಚಂದ್ರಶೇಖರ್ ಮೂಲತಃ ಹಿಮಾಚಲ ಪ್ರದೇಶ ಐ.ಪಿ.ಎಸ್ ಕೇಡರ್‌ಗೆ ಸೇರಿದವರಾಗಿದ್ದಾರೆ. ನಂತರ, ತನ್ನ ಪತ್ನಿಯ ಅನಾರೋಗ್ಯ ಮತ್ತು ಹಿಮಾಚಲ ಪ್ರದೇಶದ ವಾತಾವರಣ ಮತ್ತು ಹವಾಗುಣ ಹೊಂದುವುದಿಲ್ಲ ಎನ್ನುವ ಕುಂಟು ನೆಪ ಹೇಳಿ ಮತ್ತು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹಾಗೂ ರಾಜಕೀಯ ಪ್ರಭಾವ ಬೀರಿ ಕರ್ನಾಟಕ ರಾಜ್ಯಕ್ಕೆ ವರ್ಗಾವಣೆಗೊಂಡು, ತದನಂತರ ಕರ್ನಾಟಕ ಐ.ಪಿ.ಎಸ್ ಕೇಡರ್‌ನಲ್ಲಿ ವಿಲೀನಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಎಂ.ಚಂದ್ರಶೇಖರ್ ವಿರುದ್ಧ ದಾಖಲಾಗಿರುವ ದೂರುಗಳು, ಎಫ್.ಐ.ಆರ್, ಕೋರ್ಟ್ ಪ್ರಕರಣಗಳು ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ದ ಅವಾಚ್ಯ, ಅಸಭ್ಯ ಮತ್ತು ಅವಹೇಳನಕಾರಿ ಪದಬಳಕೆ ಮಾಡಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಪೊಲೀಸ್ ಸೇವೆಯಿಂದ ಅಮಾನತ್ತುಗೊಳಿಸಿ ಇವರ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಲು ಅಗತ್ಯವಿರುವ ದಾಖಲಾತಿಗಳೊಂದಿಗೆ ಭಾರತೀಯ ಪೊಲೀಸ್ ಸೇವೆಗಳ ವೃಂದದ ಪ್ರಾಧಿಕಾರವಾಗಿರುವ ಕೇಂದ್ರ ಗೃಹ ಮಂತ್ರಾಲಯಕ್ಕೆ ಪ್ರಸ್ತಾವನೆಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಕಳುಹಿಸಬೇಕೆಂದು ಒತ್ತಾಯಿಸಿದ್ದಾರೆ.

ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಸುರೇಶ್ ಬಾಬು, ಐಪಿಎಸ್ ಅಧಿಕಾರಿ ಕೇಂದ್ರ ಸಚಿವರ ವಿರುದ್ಧ ನಡೆದುಕೊಂಡಿರುವ ರೀತಿ ಸರಿ ಇಲ್ಲ. ರಾಜ್ಯಪಾಲರ ಕಚೇರಿಯನ್ನು ತನಿಖೆ ಮಾಡುತ್ತೇನೆ ಎಂಬ ಉದ್ಧಟತನ‌ ಮೆರೆದಿದ್ದಾರೆ ಎಂದು ದೂರಿದರು.

ಇದನ್ನೂ ಓದಿ:ಸುಮ್ಮನೆ ರಾಜೀನಾಮೆ ಕೊಡಲು ನನಗೆ ತಲೆ ಕೆಟ್ಟಿದ್ಯಾ? ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ - HD Kumaraswamy

Last Updated : Sep 30, 2024, 2:27 PM IST

ABOUT THE AUTHOR

...view details