ಕರ್ನಾಟಕ

karnataka

ETV Bharat / state

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಅರ್ ದಾಖಲಿಸಿಕೊಳ್ಳುವಂತೆ ಲೋಕಾಯುಕ್ತಕ್ಕೆ ದೂರು - Muda Scam - MUDA SCAM

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಅರ್ ದಾಖಲಿಸಿಕೊಳ್ಳುವಂತೆ ಲೋಕಾಯುಕ್ತದಲ್ಲಿ ದೂರು ಸಲ್ಲಿಸಲಾಗಿದೆ.

LOKAYUKTA  BBMP  CM SIDDARAMAIAH  BENGALURU
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಅರ್ ದಾಖಲಿಸಿಕೊಳ್ಳುವಂತೆ ಲೋಕಾಯುಕ್ತಕ್ಕೆ ದೂರು (ETV Bharat)

By ETV Bharat Karnataka Team

Published : Aug 19, 2024, 1:22 PM IST

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮವಾಗಿ ನಿವೇಶನ ಪಡೆದ ಸಂಬಂಧ ರಾಜ್ಯಪಾಲರು ಈಗಾಗಲೇ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಬೇಕೆಂದು ಲೋಕಾಯುಕ್ತಕ್ಕೆ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್ ದೂರು ನೀಡಿದ್ದಾರೆ.‌

ಭ್ರಷ್ಟಾಚಾರ, ಅಧಿಕಾರ ದುಬರ್ಳಕೆ, ನಕಲಿ ದಾಖಲಾತಿ ಸೃಷ್ಟಿ ಹಿನ್ನೆಲೆಯಲ್ಲಿ ಮುಡಾದಿಂದ 14 ನಿವೇಶನಗಳನ್ನು ಪಡೆದು ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಬಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಬೇಕೆಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.

ಮುಡಾ ಹಗರಣದಲ್ಲಿ ಈಗಾಗಲೇ ರಾಜ್ಯಪಾಲರು ಆಗಸ್ಟ್ 17ರಂದು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದರಂತೆ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿದೆ. ಮುಖ್ಯಮಂತ್ರಿ ವಿರುದ್ಧ ಮುಡಾ ಹಗರಣ ಬಿಗಿಯಾಗುತ್ತಿದ್ದಂತೆ ಸಿದ್ದರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ರದ್ದು ಮಾಡುವಂತೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ವಿಚಾರಣೆ ನಡೆಸಿರುವ ನ್ಯಾಯಾಲಯವು ಇಂದು ಮಧ್ಯಾಹ್ನಕ್ಕೆ ಮುಂದೂಡಿದೆ.

ಓದಿ:ಪ್ರಾಸಿಕ್ಯೂಷನ್‌ಗೆ ಅನುಮತಿ ಪ್ರಶ್ನಿಸಿ ಹೈಕೋರ್ಟ್​ಗೆ ಸಿಎಂ ಸಿದ್ದರಾಮಯ್ಯ ಅರ್ಜಿ - CM Petition Against Prosecution

ABOUT THE AUTHOR

...view details