ಮೈಸೂರು:ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಸಾಮಾಜಿಕ ಜಾಲತಾಣದ ಮೂಲಕ ಸಂಸದ ಪ್ರತಾಪ್ ಸಿಂಹ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಜಾಲತಾಣದಲ್ಲಿ ಯದುವೀರ್ ಒಡೆಯರ್ ಬರೆದ ಪತ್ರ ಹೀಗಿದೆ:
ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ.
ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ.ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ. ಕಳೆದ ಒಂಭತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗೂ ನಮ್ಮ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದು ಅನೇಕ ಪ್ರಜಾಬಾಂಧವರನ್ನು ಭೇಟಿಮಾಡುವ ಅವಕಾಶ ಸಿಕ್ಕಿದ್ದು, ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಅತಿಥ್ಯವನ್ನು ನೀಡಿದ್ದೀರಿ, ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ.
ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ ಮೈಸೂರು ಮತ್ತು ಕೊಡಗಿನ ಸರ್ವಾಂಗೀಣ ಏಳಿಗೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ನಾನು ಆಶಿಸುತ್ತಿದ್ದೇನೆ, ಹಾಗೂ ಮೈಸೂರು-ಕೊಡಗಿನ ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ.