ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ಕೃಷಿ ವಿವಿ ಸ್ಥಾಪನೆಗೆ ಅನುಮೋದನೆ; ಸಿಎಂ, ಡಿಸಿಎಂಗೆ ಅಭಿನಂದನೆ - MANDYA MLAS MET CM AND DCM

ಮಂಡ್ಯದಲ್ಲಿ ಕೃಷಿ ವಿವಿ ಸ್ಥಾಪನೆಗೆ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

MANDYA MLAS MET CM AND DCM
ಮಂಡ್ಯದಲ್ಲಿ ಕೃಷಿ ವಿವಿ ಸ್ಥಾಪನೆಗೆ ಅನುಮೋದನೆ ನೀಡಿದ ಹಿನ್ನೆಲೆ ಸಿಎಂ ಮತ್ತು ಡಿಸಿಎಂಗೆ ಅಭಿನಂದನೆ (ETV Bharat)

By ETV Bharat Karnataka Team

Published : Jan 22, 2025, 8:46 PM IST

ಬೆಂಗಳೂರು: ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸಚಿವ ಸಂಪುಟದಲ್ಲಿ ಸರ್ಕಾರ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್‌ ಬಿಲ್‌ 52 ಕೋಟಿ ರೂ. ಮನ್ನಾ ಮಾಡಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಶಾಸಕರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಶಾಸಕರಾದ ನೆ.ಲ.ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ದರ್ಶನ್‌ ಪುಟ್ಡಣ್ಣಯ್ಯ, ಉದಯಗೌಡ, ರವಿಶಂಕರ್‌, ಹರೀಶ್‌ ಗೌಡ, ದಿನೇಶ ಗೂಳಿಗೌಡ, ಮಧು ಮಾದೇಗೌಡ, ಮೈಷುಗರ್‌ ಅಧ್ಯಕ್ಷ ಗಂಗಾಧರ್‌ ಮತ್ತಿತರರು ಉಪಸ್ಥಿತರಿದ್ದರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರಿಗೆ ಅಭಿನಂದನೆ (ETV Bharat)

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎನ್. ಚಲುವರಾಯಸ್ವಾಮಿ ಅವರು, ಕಾವೇರಿ ಕೊಳ್ಳದ ಪ್ರಾಂತ್ಯಕ್ಕೆ ಕೃಷಿ ವಿಶ್ವವಿದ್ಯಾಲಯವನ್ನು ಮಂಡ್ಯದಲ್ಲಿ ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿದೆ. ಅದೇ ರೀತಿ ಕರ್ನಾಟಕ ರಾಜ್ಯದ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್ ಬಿಲ್ 52 ಕೋಟಿ ರೂಪಾಯಿಗಳನ್ನು ಸಚಿವ ಸಂಪುಟ ಮನ್ನಾ ಮಾಡಿರುವುದಕ್ಕೆ ಸಿಎಂ ಅವರಿಗೆ ಮಂಡ್ಯ ಜಿಲ್ಲೆಯ ಪರವಾಗಿ ಧನ್ಯವಾದ ತಿಳಿಸಿ ಅವರನ್ನು ಸನ್ಮಾನಿಸಲಾಯಿತು ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರಿಗೆ ಅಭಿನಂದನೆ (ETV Bharat)

ಇದನ್ನೂ ಓದಿ:ಬೆಂಗಳೂರಿನ ಅತಿ ಎತ್ತರದ ಅವಳಿ ಟವರ್ ಯೋಜನೆಗೆ ಸರ್ಕಾರ ಮರುಜೀವ: ಯೋಜನಾ ವೆಚ್ಚದ ಆರ್ಥಿಕ ಹೂಡಿಕೆಯ 5 ಫಾರ್ಮುಲಾ ಸಿದ್ಧ! - TWIN TOWER PROJECT

ABOUT THE AUTHOR

...view details