ಕರ್ನಾಟಕ

karnataka

ETV Bharat / state

ಅಥಣಿಯಲ್ಲಿ ಕಾಂಗ್ರೆಸ್​​ ಕಾರ್ಯಕರ್ತನ ಬರ್ಬರ ಹತ್ಯೆ - Congress Activist Killed - CONGRESS ACTIVIST KILLED

ಶಾಸಕರಾದ ಲಕ್ಷ್ಮಣ್ ಸವದಿ, ರಾಜು ಕಾಗೆ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕಾಂಗ್ರೆಸ್​ ಕಾರ್ಯಕರ್ತ ಅಣ್ಣಪ್ಪ ಬಸಪ್ಪ ನಿಂಬಾಳ ಕೊಲೆಯಾಗಿದ್ದಾರೆ.

Congress Activists Killed
ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

By ETV Bharat Karnataka Team

Published : Apr 4, 2024, 6:31 AM IST

Updated : Apr 4, 2024, 8:13 AM IST

ಚಿಕ್ಕೋಡಿ/ಅಥಣಿ: ಹಣಕಾಸಿನ ವಿಚಾರವಾಗಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತನನ್ನು ನಡು ರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ರಾತ್ರಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದ ಖೀಳೆಗಾಂವ - ಅಥಣಿ ರಸ್ತೆಯಲ್ಲಿ ನಡೆದಿದೆ. ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ.

ಎರಡು ಬೈಕಿನಲ್ಲಿ ಬಂದ ಆರು ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪರಿಣಾಮ ಅಣ್ಣಪ್ಪ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ದುರ್ದೈವಿ ಖೀಳೆಗಾಂವ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಜೊತೆಗೆ ಅಥಣಿ ಶಾಸಕ ಲಕ್ಷ್ಮಣ್ ಸವದಿ ಮತ್ತು ಕಾಗವಾಡ ಶಾಸಕ ರಾಜು ಕಾಗೆ ಅವರ ಆಪ್ತ ಬಳಗದಲ್ಲಿ ಇವರು ಒಬ್ಬರಾಗಿ ಗುರುತಿಸಿಕೊಂಡಿದ್ದರು. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಸುಮಲತಾ ಅಂಬರೀಶ್‌ಗಾಗಿ ಕೈ ಆಪರೇಷನ್‌ ಮುಂದೂಡಿ ಮಂಡ್ಯಕ್ಕೆ ಬಂದ ನಟ ದರ್ಶನ್ - Actor Darshan

Last Updated : Apr 4, 2024, 8:13 AM IST

ABOUT THE AUTHOR

...view details