ತುಮಕೂರು:ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮನೆಗೆ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಇಂದು ಭೇಟಿ ನೀಡಿ ಮಾತುಕತೆ ನಡೆಸಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ತುಮಕೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡಿದ ಕ್ಷಣದಿಂದಲೂ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದರು. ತನಗೇ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದರು. ಅನೇಕ ಬಾರಿ ಬಿಜೆಪಿ ಹಿರಿಯ ಮುಖಂಡರು ಮತ್ತು ಸೋಮಣ್ಣ ಕೂಡ ಮಾಧುಸ್ವಾಮಿ ಮನೆಗೆ ತೆರಳಿ ಅಸಮಾಧಾನ ಶಮನ ಮಾಡುವ ಪ್ರಯತ್ನ ನಡೆಸಿದ್ದರು. ಆದರೆ ಇದ್ಯಾವುದಕ್ಕೂ ತಣ್ಣಗಾಗದ ಮಾಧುಸ್ವಾಮಿ ತಟಸ್ಥ ನಿಲುವು ವ್ಯಕ್ತಪಡಿಸಿದ್ದರು.