ಕರ್ನಾಟಕ

karnataka

ETV Bharat / state

ಚಿಕ್ಕೋಡಿ ಲೋಕಸಭಾ ಕ್ಷೇತ್ರ: ಪ್ರಿಯಾಂಕ ಜಾರಕಿಹೊಳಿ ನಾಮಪತ್ರ ಸಲ್ಲಿಕೆ - Priyanka Jarkiholi - PRIYANKA JARKIHOLI

ಚಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಪ್ರಿಯಾಂಕ ಜಾರಕಿಹೊಳಿ ಇಂದು ನಾಮಪತ್ರ ಸಲ್ಲಿಸಿದರು.

ಪ್ರಿಯಾಂಕ ಜಾರಕಿಹೊಳಿ ನಾಮಪತ್ರ ಸಲ್ಲಿಕೆ
ಪ್ರಿಯಾಂಕ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

By ETV Bharat Karnataka Team

Published : Apr 18, 2024, 4:40 PM IST

Updated : Apr 18, 2024, 6:25 PM IST

ಪ್ರಿಯಾಂಕ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಚಿಕ್ಕೋಡಿ: ನಮ್ಮ ಕುಟುಂಬದಿಂದ ಮೊದಲನೇ ಮೊಮ್ಮಗಳಾಗಿ ನಾನು ನಾಮಪತ್ರ ಸಲ್ಲಿಸಿರುವುದು ಖುಷಿ ತಂದಿದೆ ಎಂದು ಚಿಕ್ಕೋಡಿಯಿಂದ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಹೇಳಿದ್ದಾರೆ. ಇಂದು ಚಿಕ್ಕೋಡಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಜಿಲ್ಲೆಯ ಜನರು ಈ ಬಾರಿ ನನಗೆ ಮತ ನೀಡುವ ಎಂಬ ವಿಶ್ವಾಸವಿದೆ. ಎಲ್ಲಾ ಹಿರಿಯ ನಾಯಕರ ಆಶೀರ್ವಾದವೂ ನನ್ನ ಜೊತೆಗಿದೆ. ಹೀಗಾಗಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.

ಸತೀಶ್ ಜಾರಕಿಹೊಳಿ ಮಾತನಾಡಿ, ಹೊಸಬರಿಗೆ ಮತದಾರರು ಆಶೀರ್ವಾದ ಮಾಡಬೇಕು. ಈ ಬಾರಿ ನಾವು ಎಷ್ಟು ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ. ಆದರೆ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

ಕಾಂಗ್ರೆಸ್ ವಿರುದ್ಧ ರೆಬೆಲ್ ಆಗಿರುವ ಶಂಭು ಕಲ್ಲೋಳ್ಕರ್ ವಿಚಾರಕ್ಕೆ, ಮಾಜಿ ಐಎಎಸ್ ಅಧಿಕಾರಿ ಶಂಭು ಕಲ್ಲೋಳ್ಕರ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ನಮ್ಮ ಪಕ್ಷಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಚಿಕ್ಕೋಡಿ, ಬೆಳಗಾವಿಯಲ್ಲಿ ಈ ಬಾರಿ ಯುವಕರಿಗೆ ಅವಕಾಶ ಕಲ್ಪಿಸಲಾಗಿದೆ. ಸಾಮಾಜಿಕ ನ್ಯಾಯದಡಿ ಎಸ್​ಟಿ, ಲಿಂಗಾಯತ, ಮರಾಠ ಸಮುದಾಯಕ್ಕೆ ಟಿಕೆಟ್ ನೀಡಲಾಗಿದೆ ಎಂದರು. ಶಂಭು ಕಲ್ಲೋಳ್ಕರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ವಿಚಾರಕ್ಕೆ, ಅವರು ನಮ್ಮ ಪಕ್ಷದವರೇ ಅಲ್ಲ. ಅವರ ಸ್ಪರ್ಧೆಯಿಂದ ನಾವು ತಲೆಕೆಡಿಸಿಕೊಳ್ಳಲ್ಲ. ಎರಡೂ ಕ್ಷೇತ್ರದಲ್ಲಿ ಒಳ್ಳೆಯ ಅಂತರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ:ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು - BJP Complaint To EC

Last Updated : Apr 18, 2024, 6:25 PM IST

ABOUT THE AUTHOR

...view details